ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೋವಾದಲ್ಲಿ ಕಳ್ಳತನ: ಕೊಡಗಿನ ವ್ಯಕ್ತಿ ಸೇರಿ ಮೂವರ ಬಂಧನ

Twitter
Facebook
LinkedIn
WhatsApp
pro 4

ಮಡಿಕೇರಿ: ಗೋವಾದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಆರೋಪಿ ಸೇರಿದಂತೆ ಮೂವರನ್ನು ಗೋವಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಹೈಸ್ಕೂಲ್‌ ಪೈಸಾರಿ ನಿವಾಸಿ ಶಾಜಿ ಸೇರಿದಂತೆ ಕೇರಳ ರಾಜ್ಯದ ಶರೀಫ್ ಹಾಗೂ ಶ್ರೀತು ಬಂಧಿತರು.ಪಣಜಿಯ ಪೆರನಮ್‌ ಸೇರಿದಂತೆ ಸುತ್ತಲಿನ ಪ್ರವಾಸಿ ತಾಣಗಳಲ್ಲಿ, ಜನನಿಬಿಡ ಪ್ರದೇಶದಲ್ಲಿ ಭಾರತೀಯರು ಹಾಗೂ ವಿದೇಶಿಯರು ತಂಗುತ್ತಿದ್ದ ಮನೆ, ರೆಸಾರ್ಟ್‌ ಮತ್ತಿತರೆಡೆ ಬೀಗ ಮುರಿದು ಮತ್ತು ಕಿಟಕಿ ಒಡೆದು ಬೆಲೆಬಾಳುವ ವಸ್ತುಗಳು, ಹಣವನ್ನು ಮೂವರು ದೋಚುತ್ತಿದ್ದರು ಎಂಬ ಆರೋಪದಡಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

 

ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದರು. ಈಗ ಮೂವರನ್ನು ಗೋವಾ ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ. ಆರೋಪಿಗಳಿಂದ ಅಪಾರ ಪ್ರಮಾಣದ ನಗದು, ಬೆಲೆ ಬಾಳುವ ಕೆಮರಾ, ಲೆನ್ಸ್‌, ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್‌, ಲ್ಯಾಪ್‌ಟಾಪ್‌, ಆಭರಣ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು