ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್‌ಪೋಸ್ಟ್‌ ನಲ್ಲಿ ಬಿಗಿ ತಪಾಸಣೆಗೆ ಕ್ರಮ

Twitter
Facebook
LinkedIn
WhatsApp
pro 6

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ರಾಜ್ಯದ, ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಬಿಗು ತಪಾಸಣೆ ಆರಂಭಿಸಿದೆ.

 

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್‌ ಪೋಸ್ಟ್‌ ನಲ್ಲಿ ಬೆಳ್ತಂಗಡಿ ಪೋಲೀಸ್‌ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪಿಎಸ್‌ಐ ಅನಿಲ್‌ ಕುಮಾರ್‌ ಅವರ ನಿರ್ದೇಶನದಂತೆ ತಪಾಸಣೆ ಆರಂಭಿಸಲಾಗಿದ್ದು ಜಿಲ್ಲೆಯಿಂದ ಹೊರ ಹೋಗುವ, ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಚೆಕ್‌ ಪೋಸ್ಟ್‌ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತ್ರಾಸ್ತ್ರ, ಉಡುಗೊರೆ ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲ ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು