ಬಂಟ್ವಾಳ : ಮುಳುಗು ಸೇತುವೆಯಲ್ಲಿ ಸಿಲುಕಿಕೊಂಡ ಪಿಕ್-ಅಪ್ ವಾಹನ!
Twitter
Facebook
LinkedIn
WhatsApp

ಬಂಟ್ವಾಳ: ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಪಿಕಪ್ ವಾಹನವೊಂದು సిలుಕಿಕೊಂಡಿದ್ದು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಸ್ಥಳೀಯರು, ಪೊಲೀಸರು ಸೇರಿ ರಕ್ಷಣಾ ಕಾರ್ಯ ಮಾಡಿದ್ದಾರೆ.
ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಕಳದರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿದೆ.
ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕ್ ಅಪ್ ಚಾಲಕರೋರ್ವರು ತಮ್ಮ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ. ಕ್ಷಣದಿಂದ ಕ್ಷಣಕ್ಕೆ ನೀರಿನಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಅದರೊಳಗಡೆ ಸಿಲುಕಿರುವವರನ್ನು ರಕ್ಷಣೆ ಮಾಡುವ ಕಾರ್ಯ ಮಾಡಿದ್ದಾರೆ. ಪಿಕ್ ಅಪ್ ವಾಹನವು ಪಡೀಲು ಭಾಗದಿಂದ ಕೆದಿಲ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.