ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು!

Twitter
Facebook
LinkedIn
WhatsApp
ಮಂಗಳೂರು : ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು!

ಮಂಗಳೂರು: ನಗರದ ಹೊರ ವಲಯದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪದ ಹಳ್ಳಕ್ಕೆ ಭಾನುವಾರ ಸಂಜೆ ಈಜಲು ತೆರಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅಳಪೆ ಪಡ್ಪು ರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು.ಘಟನೆ ವಿವರ: ಭಾನುವಾರ ಸಂಜೆ 5 ಗಂಟೆ ವೇಳೆ 6ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ಹಳ್ಳದ ದಡದಲ್ಲೇ ಕುಳಿತಿದ್ದು, ಉಳಿದವರು ಕ್ರಿಕೆಟ್ ಮೈದಾನಕ್ಕೆ ತೆರಳಿದ್ದರು. ಇವರಿಬ್ಬರನ್ನೂ ಆಟಕ್ಕೆ ಒತ್ತಾಯಿಸಿದರೂ ಇವರೂ ಹೋಗಲೇ ಇಲ್ಲ. ಹಳ್ಳದ ದಡದಲ್ಲಿ ಕುಳಿತಿದ್ದ ಸಂದರ್ಭ ವರುಣ್ ಆಯ ತಪ್ಪಿ ನೀರಿಗೆ ಬಿದ್ದಿದ್ದಾರೆ. 

ಇದನ್ನು ನೋಡಿದ ವೀಕ್ಷಿತ್ ಕೂಡಲೇ ಹಳ್ಳಕ್ಕೆ ಹಾರಿದ್ದಾರೆ. ಆದರೆ ಹಳ್ಳದಲ್ಲಿ ಹೂಳು ತುಂಬಿದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ನಡೆದ ಕೆಲವೇ ಕ್ಷಣದಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಳಿಕ ಅಗ್ನಿಶಾಮಕ ದಳದವರು ಬಂದು ಕಾರ್ಯಾಚರಣೆ ನಡೆಸಿದರು. ಸುಮಾರು ಹೊತ್ತಿನ ಬಳಿಕ ವರುಣ್ ಮೃತದೇಹ ಪತ್ತೆಯಾಗಿದ್ದು, ಹಳ್ಳದ ದಡಕ್ಕೆ ತರಲಾಯಿತು. ಆದರೆ ಇಷ್ಟು ಗಂಭೀರ ಪ್ರಕರಣ ನಡೆದರೂ ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಬರುವಾಗ ವಿಳಂಬವಾಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತವಾಯಿತು. ಸಂಜೆ ವೇಳೆ ಘಟನೆ ನಡೆದಿದ್ದು, ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ ಕೆಲವೇ ಕ್ಷಣದಲ್ಲಿ ಕತ್ತಲು ಆವರಿಸಿತ್ತು. ಇದರಿಂದ ಕಾರ‌್ಯಾಚರಣೆಗೆ ಅಡ್ಡಿಯಾಗಿದೆ. ಆದರೂ ಸಿಬ್ಬಂದಿ ನಿರಂತರ ಕಾರ‌್ಯಾಚರಣೆ ಮುಂದುವರಿಸಿ, ವೀಕ್ಷಿತ್‌ನ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು