ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಂತ್ಯಾರು: ಬಸ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ - ಆರೋಪಿಯ ಬಂಧನ

Twitter
Facebook
LinkedIn
WhatsApp
ಮಡಂತ್ಯಾರು: ಬಸ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ - ಆರೋಪಿಯ ಬಂಧನ

ಬೆಳ್ತಂಗಡಿ, ಜು 30: ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಯುವಕನೋರ್ವ ಅಸಭ್ಯವಾಗಿ ನಡೆದುಕೊಂಡ ಘಟನೆ ಮಡಂತ್ಯಾರು ಸಮೀಪ ನಡೆದಿದೆ.

ಚಿಕ್ಕಮಗಳೂರಿನ ಮೂಡಿಗೆರೆ ಯುವತಿ ತನ್ನೂರಿಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ತೆರಳುವ ವೇಳೆ ಜ್ಯೋತಿ ಬಳಿ ಯುವಕ ಯುವತಿಯ ಪಕ್ಕ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ ಹಿಂದಕ್ಕೆ ತಲುಪಿದಾಗ ಆತನು ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಪ್ರತೀರೋಧಿಸಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಅವರು ಯುವತಿ ಪೋಷಕರಿಗೆ ಮಾಹಿತಿ ನೀಡಿ ಉಜಿರೆಯ ಬಳಿ ಬಸ್‌ ಬಂದಾಗ ಆರೋಪಿತನನ್ನು ಬಸ್ ಚಾಲಕ ಮತ್ತು ನಿರ್ವಾಹಕರ ಸಹಾಯ ಪಡೆದು ಪೊಲೀಸರಿಗೊಪ್ಪಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Bantwala: ಆಟೊ ರಿಕ್ಷಾ, ಕಾರು ನಡುವೆ ಅಪಘಾತ- ಆಟೋ ಚಾಲಕನಿಗೆ ಗಾಯ

ಬಂಟ್ವಾಳ:  ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.

ಅಪಘಾತದಲ್ಲಿ ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಗಾಯಗೊಂಡಿದ್ದಾರೆ. ರಿಕ್ಷಾ ಸೂರಿಕುಮೇರ್ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಚಲಾಯಿಸುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ.

ಮಂಗಳೂರು : ಸಾರ್ವಜನಿಕರಿಗೆ ಮಂಗಳಮುಖಿಯರಿಂದ ಕಿರುಕುಳ ಆರೋಪ -13 ಮಂದಿ ಮೇಲೆ ಕಾನೂನು ಕ್ರಮ..!

ಮಂಗಳೂರು : ಮಂಗಳಮುಖಿಯರು ಸಾರ್ವಜನಿಕರಿಗೆ ವ್ಯಾಪಕ ಕಿರುಕುಳ ಮತ್ತು ದಾರಿಹೋಕರಿಂದ ಬಲವಂತವಾಗಿ ಹಣವನ್ನು ವಸೂಲಿ ಮಾಡುವ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಏಕಾಏಕಿಯಾಗಿ ಮಂಗಳೂರು ಪೊಲೀಸರು ಮಂಗಳಮಖಿಯರಿಗೆ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ.

13 ಮಂದಿ ಮಂಗಳಮುಖಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಂಜೆಯಾಗುತ್ತಿದ್ದಂತೆ ಮಂಗಳಮುಖಿಯರು‌ ಮಂಗಳೂರು ನಗರದ ಕುಂಟಿಕಾನದ ಬಳಿ ಇರುವ ಅಂಡರ್ ಪಾಸ್ ಕೆಳಗೆ ನಿಂತು‌ ಗಂಡಸರಿಗೆ ಲೈಂಗಿಕ ‌ಕ್ರಿಯೆಗೆ ಪ್ರಚೋದನೆ ನೀಡುವುದು, ದಾರಿಹೋಕರಿಂದ ಬಲವಂತದ ಹಣ ವಸೂಲಿ ಮಾಡುವುದು ಸರ್ವೇ ಸಾಮಾನ್ಯವಾಗಿತ್ತು.

ಈ ಹಿಂದೆ ಕೂಡಾ ಕುಂಟಿಕಾನ ಕೆಳಸೇತುವೆ ಬಳಿ ಇದೇ ರೀತಿ ಅಸಭ್ಯವಾಗಿ ನಿಂತು ಕಿರುಕುಳ ನೀಡುತ್ತಿದ್ದು ವ್ಯಾಪಕವಾಗಿ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು.

ಪ್ರತಿಭಟನೆ ಕೂಡಾ ನಡೆದಿತ್ತು. ಹೀಗಾಗಿ ಇಲ್ಲಿ ನಿಂತು ಅಸಭ್ಯವಾಗಿ ವರ್ತಿಸಬಾರದೆಂದು ಉರ್ವ ಪೊಲೀಸರು ಮಂಗಳಮುಖಿಯರಿಗೆ ಎಚ್ಚರಿಕೆ ನೀಡಿದ್ದರು.

ಇದೇ ಜಾಗದಲ್ಲಿ ಶನಿವಾರ ರಾತ್ರಿಯೂ ನಡೆದಿದ್ದು, ಅನ್ಯ ಜಿಲ್ಲೆಗಳಿಂದ ಬಂದ ಕೆಲವು ಮಂಗಳಮುಖಿಯರು ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುವುದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು