ಮಡಿಕೇರಿ ವಿಧಾನಸಭಾ ಕ್ಷೇತ್ರದ ಆಲೂರು ಸಿದ್ದಾಪುರದಲ್ಲಿ ಡಾ. ಮ0ತರ್ ಗೌಡ ವ್ಯಾಪಕ ಚುನಾವಣಾ ಪ್ರಚಾರ
Twitter
Facebook
LinkedIn
WhatsApp

ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ರವರು ಆಲೂರು ಸಿದ್ದಾಪುರ ಭಾಗದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಪರ ಚಿಂತನೆಗಳಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತದೆ. ಪ್ರತಿಯೊಂದು ಗ್ರಾಮದ ಜನರು ನನ್ನ ಅಭಿವೃದ್ಧಿ ಚಿಂತನೆಗಳಿಗೆ ಬೆಂಬಲ ನೀಡುತ್ತಿರುವುದು ಉತ್ತೇಜನಕಾರಿ ಅಂಶ ಎಂದು ಅವರು ನುಡಿದಿದ್ದಾರೆ.