ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದಿರೆ :ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ವಿಧ್ಯಾರ್ಥಿನಿ ಸಾವು

Twitter
Facebook
LinkedIn
WhatsApp
WhatsApp Image 2023 03 14 at 10.16.22 AM 400x330 1

ಮೂಡಬಿದಿರೆ : ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.

ಮಿಸ್ರಿಯಾ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು, ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್‌ ಭಂಡಾರಿ, ಸರಕಾರಿ ಆಸ್ಪತ್ತೆಗಳಲ್ಲಿ ಡೆಂಗ್ಯೂ ಸಹಿತ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದಲ್ಲಿ ಕೂಡಲೇ ಮಾಹಿತಿ ಲಭಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಮಲೇರಿಯಾ ಕೇಂದ್ರಕ್ಕೆ ವರದಿ ಬಂದ ಬಳಿಕವಷ್ಟೇ ನಮಗೆ ಮಾಹಿತಿ ಸಿಗಲು ಸಾಧ್ಯ ಮತ್ತು ಆ ಕುರಿತು ಸೂಕ್ತ ಸಮೀಕ್ಷೆ, ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಮಿಸ್ರಿಯಾ ಪ್ರಕರಣ ಇನ್ನಷ್ಟೇ ಮಲೇರಿಯಾ ಕೇಂದ್ರಕ್ಕೆ ವರದಿಯಾಗಬೇಕಿದೆ. ಇದು ಡೆಂಗ್ಯೂ ನಿಂದಾದ ಸಾವು ಎಂದು ದೃಢಪಟ್ಟಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ಇದೇ ಈ ಸಾಲಿನ ಮೊದಲ ಪ್ರಕರಣ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು