ಮೂಡಬಿದ್ರಿ : ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!
Twitter
Facebook
LinkedIn
WhatsApp

ಮೂಡುಬಿದಿರೆ ಅಗಸ್ಟ್ 31 : ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ.
ಮೃತರನ್ನು ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಎಂದು ಗುರುತಿಸಲಾಗಿದೆ. ಸಂತೋಷ್ ಅವರು ಮೂಡುಬಿದಿರೆಯ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ದುಡಿಯುತ್ತಿದ್ದರು. ಗುರುವಾರ ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಪಾಜೆ: ವಾಹನ ಢಿಕ್ಕಿ ಹೊಡೆದು ಕಾಡುಹಂದಿ ಮೃತ್ಯು
ವಾಹನ ಢಿಕ್ಕಿ ಹೊಡೆದು ಭಾರೀ ಗಾತ್ರದ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಆ.30ರಂದು ರಾತ್ರಿ ಸಂಭವಿಸಿದೆ.
ವಿಷಯ ತಿಳಿದು ಸಂಪಾಜೆಯ ಅರಣ್ಯಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಕಾಡು ಹಂದಿಯನ್ನು ಕಲ್ಲುಗುಂಡಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.