ಲಾರಿ – ಬೈಕ್ ಡಿಕ್ಕಿ: ಗುರುವಾಯನಕೆರೆಯ ಯುವಕ ಸಾವು, ಮತ್ತೋರ್ವ ಗಂಭೀರ
Twitter
Facebook
LinkedIn
WhatsApp
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಕರ್ತವ್ಯ ಮುಗಿಸಿ ವಾಪಸ್ ಬರುವ ಸಂದರ್ಭ ಮುಂಡ್ರುಪಾಡಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದು, ಸಹಸವಾರ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.