ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿದ 298 ಮಂದಿ ಚಾಲಕರ ಡಿಎಲ್​ ರದ್ದಿಗೆ ಶಿಫಾರಸು!

Twitter
Facebook
LinkedIn
WhatsApp
ಮಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿದ 298 ಮಂದಿ ಚಾಲಕರ ಡಿಎಲ್​ ರದ್ದಿಗೆ ಶಿಫಾರಸು!

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರಿ ನಿಯಮ ಉಲ್ಲಂಫಿಸಿದ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡಲು ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

 ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸರು ಮುಂದಾಗಿದ್ದಾರೆ.

ಸುಪ್ರೀಂ ಕೋರ್ಟ್​ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ.

298 ಪ್ರಕರಣಗಳ ವಿವರ: ಅತಿವೇಗ, ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ 71 ಪ್ರಕರಣಗಳು ದಾಖಲಾದರೆ, ಮದ್ಯಸೇವಿಸಿ ಚಾಲನೆ 20 ಪ್ರಕರಣ, ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ 42 ಪ್ರಕರಣ, ಚಾಲನೆ ವೇಳೆ ಮೊಬೈಲ್ ಬಳಕೆ 4 ಪ್ರಕರಣ, ಸಿಗ್ನಲ್ ಜಂಪಿಂಗ್ ಪ್ರಕರಣ 10 ಪ್ರಕರಣ, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣ 7 ಪ್ರಕರಣ, ಹೆಲ್ಮೆಟ್ ಹಾಕದೆ ವಾಹನ ಚಾಲನೆ 128 ಪ್ರಕರಣ, ಸೀಟ್‌ ಬೆಲ್ಟ್ ಹಾಕದೆ ಚಾಲನೆಯ 16 ಪ್ರಕರಣಗಳು ದಾಖಲಾಗಿವೆ. ಒಟ್ಟು 298 ಪ್ರಕರಣ. ಈ ಪ್ರಕರಣಗಳಲ್ಲಿ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.

ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ಮೂಲಕ ನಿಷೇಧಿತ ಸ್ಥಳದಲ್ಲಿ ಪಾರ್ಕಿಂಗ್ 593, ಕರ್ಕಶ ಹಾರ್ನ್ 106, ಟಿಂಟ್ ಗ್ಲಾಸ್ 70, ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬಾಡಿಗೆ ಹೋಗದಿರುವ ಪ್ರಕರಣ 13, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರದ 28 ಪ್ರಕರಣಗಳು ದಾಖಲಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು