ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರುಗಳ ಮಧ್ಯೆ ಭೀಕರ ಅಪಘಾತ; ನಾಲ್ವರು ಗಂಭೀರ!

Twitter
Facebook
LinkedIn
WhatsApp
ಕಾರುಗಳ ಮಧ್ಯೆ ಭೀಕರ ಅಪಘಾತ; ನಾಲ್ವರು ಗಂಭೀರ!

ಉಡುಪಿ: ಓವರ್ ಟೇಕ್ ಮಾಡುವ ಭರದಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.

ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್‌ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು

ಕಡಬ: ರಿಯಾದ್‌ನಲ್ಲಿ ಹ್ಯಾಕರ್‌ ಗಳ ಕುಕೃತ್ಯದಿಂದ ಜೈಲುಪಾಲಾದ ಚಂದ್ರಶೇಖರ್‌ ಬಿಡುಗಡೆ ಸಾಧ್ಯತೆ

ಕಡಬ, ಆ 19: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್‌ ಅವರ ಬಿಡುಗಡೆಯ ಸಾಧ್ಯತೆ ಗೋಚರಿಸಿದೆ.

2022ರ ನವೆಂಬರ್ ನಿಂದ ಸೌದಿಯ ರಿಯಾದ್ ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು ಚಂದ್ರಶೇಖರ್‌ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಿಗೆ ನೀಡಬೇಕಾಗಿದೆ. ಈ ಕೆಲಸವನ್ನು ರಿಯಾದ್‌ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್‌ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.

ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್ ನಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂದ 2ಬಾರಿ ತಂಬ್ ಅನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊಂದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.

ರಿಯಾದ್ ದೇಶದ ಚಂದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ ವೊಂದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. ಹ್ಯಾಕರ್ ಗಳ ಕುಕೃತ್ಯದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿಂದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು