ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ; ಹರೀಶ್ ಪೂಂಜಾ ವಿರುದ್ಧ ಎಫ್ಐಆರ್!

Twitter
Facebook
LinkedIn
WhatsApp
ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ; ಹರೀಶ್ ಪೂಂಜಾ ವಿರುದ್ಧ ಎಫ್ಐಆರ್!

ಧರ್ಮಸ್ಥಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಲಯ ಅರಣ್ಯಾಧಿಕಾರಿಗಳನ್ನು ನಿಂದನಾತ್ಮಕ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ ಕೆ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ಕಟ್ಟಲು ಮುಂದಾಗಿದ್ದ ಮನೆಯ ತೆರವಿಗೆ ಮುಂದಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಶಾಸಕ ಹರೀಶ್ ಪೂಂಜಾ ಅವರು ವಾಗ್ವಾದ ನಡೆಸಿದ್ದರು. ಈ ಘಟನೆಯ ವೀಡಿಯೋ ತಡವಾಗಿ ವೈರಲ್ ಆಗಿದೆ. 

ಪ್ರಕರಣ ಹಿನ್ನೆಲೆ: ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು.

ಈ ಹಿನ್ನೆಲೆ ಅಕ್ಟೋಬರ್ 6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅವರು ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಡಿಯೋಗಳು ಹರಿದಾಡಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು