ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ..!

Twitter
Facebook
LinkedIn
WhatsApp
ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ..!

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ  ಮಾಡುತ್ತಿದ್ದ ಮೂವರನ್ನು ಬಂಧಿಸಿ ಒಟ್ಟು 95 ಸಾವಿರ ರೂಪಾಯಿ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮಡಿಕೇರಿ ಪ್ರಮೋದ್ ಎಮ್.ಜಿ.(30), ಮೊಹಮ್ಮದ್ ರಾಶೀದ್ (41) ಹಾಗೂ ದರ್ಶನ್ ಎಸ್.(24) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮೂವರು ಅಕ್ರಮವಾಗಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 75 ಸಾವಿರ ರೂಪಾಯಿ ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 95 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿತರಲ್ಲಿ ಪ್ರಮೋದ್ ಎಮ್. ಜಿ. ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ರಾಶೀದ್ ಎಂ.ಝಡ್ ಎಂಬಾತನ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿರುತ್ತವೆ. ದರ್ಶನ್ ಎಸ್. ಎಂಬಾತನ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ.

ಕಾಂಗ್ರೆಸ್ ಸರಕಾರದ ಮೇಲೆ ಬಿಜೆಪಿಯಿಂದ ಅಪಪ್ರಚಾರ-ಸಚಿವ ಬಿ.ರಮಾನಾಥ ರೈ

ಮಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ಬಗ್ಗೆ ಬಿಜೆಪಿಗರು ಕೆಟ್ಟ ಅಭಿಪ್ರಾಯ ಬರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇವರ ಅಪಪ್ರಚಾರದ ಕುತಂತ್ರ ಬುದ್ದಿಯನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕೂಡಾ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡ್ತಾ ಇದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಎಲ್ಲ ನಿಗಮದ ಸಾಲವನ್ನು ಮನ್ನಾ ಮಾಡಿದೆ. ಕೃಷಿ ಪಂಪ್ ಸೆಟ್ ಉಚಿತ ಮಾಡಿದ್ದು, ಬಡವರಿಗೆ ಬೇಕಾದ ಕಾರ್ಯಕ್ರಮ ಮಾಡಿದ್ದು ಕಾಂಗ್ರೆಸ್ ಸರಕಾರ ಎಂದರು.

ಇನ್ನು ಸರಕಾರದಿಂದ ಕಾಮಗಾರಿಗೆ ಅನುದಾನ ಬಿಡುಗಡೆ ಆಗ್ತ ಇಲ್ಲ ಎಂಬ ಆರೋಪವಿದೆ. ಸರ್ಕಾರ ಅನುದಾನ ಬಿಡುಗಡೆ ಮಾಡಲ್ಲ ಎಂದು ಯಾವತ್ತು ಹೇಳಿಲ್ಲ. ಆದರೆ ಮಂಜೂರಾತಿ ಇಲ್ಲದೆ ಅಡ್ವಾನ್ಸ್ ಕೆಲಸ ಮಾಡಿದ್ದಾರೆ. ಇದರ ತನಿಖೆ ಆಗ್ತಾ ಇದೆ. ಈ ಬಗ್ಗೆ ತನಿಖೆ ಮುಗಿದ್ರೆ ಎಲ್ಲಾ ಅನುದಾನ ಕೊಡ್ತಾರೆ ಎಂದರು. ಇನ್ನು ಜಿಲ್ಲೆಯಲ್ಲಿನ ಮರಳು ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ಅಕ್ರಮ ಮರಳುಗಾರಿಕೆ ಶಾಸಕರ ಕುಮ್ಮಕ್ಕಿನಿಂದ ಆಗ್ತಾ ಇತ್ತು.ಈಗ ಆಗ್ತಾ ಇಲ್ಲ, ಸಾಕ್ಷಿ ಆಧಾರ ಸಹಿತ, ಈಗ ಜಿಲ್ಲಾಧಿಕಾರಿ ಮಾಡಬೇಕು‌. ಅಕ್ರಮ ಮರಳುಗಾರಿಕೆ ತಡೆದಿದ್ದೇವೆ. ನಾಲ್ಕು ವರ್ಷದ ಹಿಂದಿನಿಂದ ಪರ್ಮಿಟ್ ಪಡೆದವರು ವೇವ್ ಬ್ರಿಜ್ ಮಾಡಿಲ್ಲ‌. ನಾಲ್ಕು ವರ್ಷದಿಂದ ಯಾಕೆ ಮಾಡಿಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು