ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ಒಂದೇ ಶಾಲೆಯ ಒಂದೇ ತರಗತಿಯಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು!

Twitter
Facebook
LinkedIn
WhatsApp
ಬಂಟ್ವಾಳ : ಒಂದೇ ಶಾಲೆಯ ಒಂದೇ ತರಗತಿಯಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು!

ಬಂಟ್ವಾಳ : ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.

ಸಹಪಾಠಿಗಳಂತೂ ಪುಲ್ ಕನ್ ಪ್ಯೂಶನ್ ಆಗಿಬಿಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, ಐದು ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದಾರೆ.

ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ.

ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ.

ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.

ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು