ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ರೈಲು ನಿಲ್ದಾಣದ ಹಳಿ ಮೇಲೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸರ್ ; ತಪ್ಪಿದ ಅನಾಹುತ!

Twitter
Facebook
LinkedIn
WhatsApp
ಬಂಟ್ವಾಳ : ರೈಲು ನಿಲ್ದಾಣದ ಹಳಿ ಮೇಲೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸರ್ ; ತಪ್ಪಿದ ಅನಾಹುತ!

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.

ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ‌ ತೆರವು ಕಾರ್ಯ ನಿರ್ವಹಿಸಿದರು.

ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ.

ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ‌. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.

ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು