ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bantwala :ಬಸ್ಸಿನಿಂದ ಇಳಿದು ರಸ್ತೆ ಬದಿ ನಡೆದು ಹೋಗುವ ವೇಳೆ ಕಾರು ಡಿಕ್ಕಿ ; ಯುವತಿ ಮೃತ್ಯು!

Twitter
Facebook
LinkedIn
WhatsApp
Bantwala accident

Bantwala: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಇಂದು ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ.

ಬಿಸಿರೋಡಿನ (BC Road) ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ (Bus) ಮೂಲಕ ಊರಿಗೆ ಹೋಗಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್  ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು (Car) ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು (Melkar Traffic Police) ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಜೆಡಿಎಸ್ ದ.ಕ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ವಿಧಿವಶ..!!

ಮಂಗಳೂರು: ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಮೃತರು ಮೂವರು ಪುತ್ರರು ಹಾಗೂ ಪುತ್ರಿಯನ್ನು ಮತ್ತು ಅಪಾರ ಬಂಧು ಬಳಗವನ್ನ ಅಗಲಿದ್ದಾರೆ. ಅಡ್ಯಾರು ಮಹಿಳಾ ಮಂಡಲದ ಅಧ್ಯಕ್ಷರಾಗಿ 40 ವರ್ಷ ಸೇವೆ ಸಲ್ಲಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಮುಖ್ಯ ಕಾರ್ಯಕರ್ತರಾಗಿಯೂ ಉಪಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. 

ಅಡ್ಯಾರು ಗ್ರಾಮ ಪಂಚಾಯಿತಿನಲ್ಲಿ ಎರಡು ಅವಧಿಗೆ ಆಯ್ಕೆಯಾಗಿ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಲಹಾ ಮಂಡಳಿಯಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅಡ್ಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧ್ಯಕ್ಷರಾಗಿ, ಪ್ರಜ್ಞ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇದರ, ವಸತಿಗೃಹದ ಕಮಿಟಿ ಸದಸ್ಯರಾಗಿ, ಶಿಶು ಪಾಲನಾ ಕೇಂದ್ರ ದಕ್ಷಿಣ ಕನ್ನಡ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು, ಅರ್ಕುಳ ಸೇರಿದಂತೆ ಹಲವು ಕಡೆ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಶ್ರಮಿಸಿದ್ದರು.

ಎಕ್ಸ್ ಪರ್ಟ್ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್‌ಗೆ ‘ಉದ್ಯಮಶ್ರೀ’ ಪುರಸ್ಕಾರ

ಮಂಗಳೂರು: ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿ, ಅದನ್ನು ಬೆಳೆಸಿ, ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಹಾಗೂ ಸಾಧನೆಯನ್ನು ಗುರುತಿಸಿ ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ (Prof. Narendra L Naik) ಅವರಿಗೆ  ಬೆಂಗಳೂರಿನ ಕ್ಲರ್ಕ್ ಎಕ್ಸೋಟಿಕಾ ಕನ್ವೆನ್ಶನ್ ರೆಸಾರ್ಟ್ ನಲ್ಲಿ ಸಾರಸ್ವತ ಚೇಂಬರ್, ವಿಶ್ವ ಕೊಂಕಣಿ ಕೇಂದ್ರ, ಯುಕೆ ಆ್ಯಂಡ್ ಕಂಪನಿ ಜಂಟಿಯಾಗಿ ಆಯೋಜಿಸಿದ್ದ ಸಾರಸ್ವತ್ ಹಾಗೂ ಕೊಂಕಣಿ ವಾಣಿಜ್ಯೋದ್ಯಮಿಗಳ ಸಮ್ಮೇಳನದಲ್ಲಿ ‘ಉದ್ಯಮಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಯಿತು.

ನರೇಂದ್ರ ನಾಯಕ್‌ಗೆ ‘ಉದ್ಯಮಶ್ರೀ’ ಪುರಸ್ಕಾರ

ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಸಮಾವೇಶದ ಪ್ರಮುಖ ಸಂಚಾಲಕ ಹಾಗೂ ಯುಕೆ ಆ್ಯಂಡ್ ಕಂಪನಿಯ ಸ್ಥಾಪಕ ಕೆ.ಉಲ್ಲಸ್ ಕಾಮತ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ, ಸಾರಸ್ವತ್ ಚೇಂಬರ್‌ನ ಸ್ಥಾಪಕ ನಿರ್ದೇಶಕ ಸಿದ್ಧಾರ್ಥ್ ಸಿನಕರ್, ವತಿಕಾ ಪೈ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು