ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ - ಅಮ್ಹಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ!

Twitter
Facebook
LinkedIn
WhatsApp
ಬಂಟ್ವಾಳ : ಬಿಜೆಪಿ ಸಕ್ರಿಯ ಕಾರ್ಯಕರ್ತ - ಅಮ್ಹಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತ ವೃತ್ತಿ

ಅಮ್ಮಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಔಷಧಿಗೆಂದು ಅವರು ಇಂದು ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ, ಕೆಲ ಕಾಲ ಟ್ರಾಫಿಕ್ ಜಾಮ್

ಚಿಕ್ಕಮಗಳೂರು (ಸೆ.17) : ಪ್ಲೇವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. 

ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕನ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. 

ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಆಯಿತು. ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ.  

ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು