ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು!

Twitter
Facebook
LinkedIn
WhatsApp
ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು!

ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ಬುಧವಾರ ನಡೆದಿದೆ.

ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ವಾಮದಪದವನಿಂದ ಅವರು ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದಕಾರು ಡಿಕ್ಕಿಯಾಗಿದೆ.ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ‌.

ಮೃತರು ಅಡುಗೆ ವೃತ್ತಿಯವರಾಗಿದ್ದು,ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಪುತ್ರ,ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಂಟ್ವಾಳ : ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ದೂರು ದಾಖಲು..!

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಘಟನೆ ನಡೆದಿದೆ.

ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಗೆಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.

ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು