ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಗಳಿಸಿದ ಸರಕಾರಿ ಪ್ರೌಢಶಾಲೆ ನಯನಾಡು

Twitter
Facebook
LinkedIn
WhatsApp
ಬಂಟ್ವಾಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಗಳಿಸಿದ ಸರಕಾರಿ ಪ್ರೌಢಶಾಲೆ ನಯನಾಡು

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಯ ಬಾಲಕಿಯರ ತಂಡ ಪ್ರೌಢಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಅಮೋಘ ಪ್ರದರ್ಶನ ನೀಡಿ ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ.

ಬಂಟ್ವಾಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಗಳಿಸಿದ ಸರಕಾರಿ ಪ್ರೌಢಶಾಲೆ ನಯನಾಡು

ಕು.ತನುಶ್ರೀ ತಾಲೂಕು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.. ಅದೇ ರೀತಿ ಕು.ಶ್ರಾವ್ಯ 200 ಮೀಟರ್ ಓಟದಲ್ಲಿ ಪ್ರಥಮ ಮತ್ತು 100 ಮೀಟರ್ ಓಟದಲ್ಲಿ ದ್ವಿತೀಯ, ಕು.ರಕ್ಷಿತಾ ಲಾಂಗ್ ಜಂಪ್ ನಲ್ಲಿ ಪ್ರಥಮ ಮತ್ತು 400 ಮೀಟರ್ ಓಟದಲ್ಲಿ ದ್ವಿತೀಯ, ಕು.ತನುಶ್ರೀ 800 ಮೀಟರ್ ಮತ್ತು 1500 ಮೀಟರ್ ಓಟದಲ್ಲಿ ಪ್ರಥಮ, ಕು.ಅನುಷ 3 ಕಿ.ಮೀ ನಡಿಗೆಯಲ್ಲಿ ದ್ವಿತೀಯ, ಸ್ಥಾನಗಳನ್ನು ಪಡೆದು ಮೂಡಬಿದರೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ.

ಬಂಟ್ವಾಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಗಳಿಸಿದ ಸರಕಾರಿ ಪ್ರೌಢಶಾಲೆ ನಯನಾಡು

ಅದೇ ರೀತಿ ರಾಕೇಶ್ 800 ಮೀಟರ್ ಓಟದಲ್ಲಿ ತೃತೀಯ, ಯಶ್ವಿತಾ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ಮತ್ತು ಪ್ರೌಢಶಾಲಾ ಬಾಲಕಿಯರ ರಿಲೇ ತಂಡವು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.. ಅತ್ಯಂತ ಗ್ರಾಮೀಣ ಭಾಗದ ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಯ ಮಕ್ಕಳ ಸರ್ವಾಂಗೀಣ ಸಾಧನೆಗೆ ಎಸ್ ಡಿ ಎಂಸಿ ಅಧ್ಯಕ್ಷರು ,ಸದಸ್ಯರು, ಹಿರಿಯ ವಿದ್ಯಾರ್ಥಿಗಳು ,ಊರಿನ‌ ಕ್ರೀಢಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಕನ್ಯರತ್ನಾ ,ಮುಖ್ಯ ಶಿಕ್ಷಕರು‌ ಮತ್ತು‌ ಶಿಕ್ಷಕ ವೃಂದದವರ ಅವಿರತ ಪ್ರಯತ್ನ ಕಾರಣವಾಗಿದೆ.

ಬಂಟ್ವಾಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಗಳಿಸಿದ ಸರಕಾರಿ ಪ್ರೌಢಶಾಲೆ ನಯನಾಡು
ಮಂಗಳೂರು: ವರ್ಷದ ಕೊನೆಯ ಚಂದ್ರಗ್ರಹಣ: ಪಿಲಿಕುಳದಲ್ಲಿ ವೀಕ್ಷಣೆಗೆ ಅವಕಾಶ

ಮಂಗಳೂರು, ಅ 28 : ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳು ಬೇಗನೆ ಮುಚ್ಚಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗ್ರಹಣ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಂಜೆ 7.30ರಿಂದ ಆಕಾಶ ವೀಕ್ಷಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೂರದರ್ಶಕದ ಮೂಲಕ ಗುರು ಗ್ರಹ, ಶನಿ ಗ್ರಹ ಮತ್ತು ಚಂದ್ರನನ್ನು ಕಣ್ತುಂಬಿಕೊಳ್ಳಬಹುದು.

ಇದೇ ಸಮಯದಲ್ಲಿ ಕಾಣಸಿಗುವ ನಕ್ಷತ್ರಗಳು ಮತ್ತು ನಕ್ಷತ್ರ ಪುಂಜಗಳನ್ನು ಗುರುತಿಸುವುದು ಮತ್ತು ಗ್ರಹಣಗಳ ಬಗ್ಗೆ ಮಾಹಿತಿಯನ್ನು ಕೇಂದ್ರದ ಸಿಬ್ಬಂದಿಗಳು ನೀಡುತ್ತಾರೆ.

ಆಸಕ್ತರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಗ್ರಹಣವನ್ನು ವೀಕ್ಷಿಸಲು ಸಹ ಅನುವು ಮಾಡಿಕೊಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಲಾಗದ ಸಾರ್ವಜನಿಕರು ಈ ಗ್ರಹಣವನ್ನು ತಮ್ಮ ಮನೆಯಲ್ಲಿಯೇ ವೀಕ್ಷಿಸಲು ಪ್ರಶಸ್ತ್ಯ ಸ್ಥಳವನ್ನು ಆಯ್ಕೆ ಮಾಡಿಕೊಂಡು ಬರೀಗಣ್ಣಿನಿಂದ ನೋಡಬಹುದು. ಬೈನಾಕ್ಯುಲರ್ ಅಥವಾ ಟೆಲಿಸ್ಕೋಪ್ ಇದ್ದರೆ ಉಪಯೋಗಿಸಿ. ಯಾವ ವಿಶೇಷ ತರಹದ ಮುಂಜಾಗ್ರತೆ ಅಗತ್ಯವಿಲ್ಲ. ಮೋಡಗಳಿಲ್ಲದ ಶುಭ್ರ ವಾತಾವಾರಣವು ಈ ವಿದ್ಯಾಮಾನವನ್ನು ವೀಕ್ಷಿಸಲು ಅನುಕೂಲಕರ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು