ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವರ ಮನೆ ಪ್ರವಾಸಿ ತಾಣಕ್ಕೆ ಹೋಗಿದ್ದ ಬೆಳ್ತಂಗಡಿ ಯುವಕ ನಾಪತ್ತೆ!

Twitter
Facebook
LinkedIn
WhatsApp
ದೇವರ ಮನೆ ಪ್ರವಾಸಿ ತಾಣಕ್ಕೆ ಹೋಗಿದ್ದ ಬೆಳ್ತಂಗಡಿ ಯುವಕ ನಾಪತ್ತೆ!

ಬೆಳ್ತಂಗಡಿ ಅಕ್ಟೋಬರ್ 11: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ದೀಕ್ಷಿತ್ ಕಾರು ಹತ್ತದೆ ತೆರಳಿದ್ದು, ಯುವಕ ಕಣ್ಮರೆಯಾಗಿದ್ದಾನೆ.

ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

ನೇತ್ರಾವತಿ ಸೇತುವೆ ಬಳಿ ಅಪಘಾತ – ಸವಾರ ಸಾವು!

ಮಂಗಳೂರು ಅಕ್ಟೋಬರ್ 11: ಎದುರುಗಡೆ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ವಾಹನದ ಹಿಂದೆ ಇದ್ದ ಸ್ಕೂಟರ್ ಸವಾರ ನಿಂತ್ರಣ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀದ್ (21)ಎಂದು ಗುರುತಿಸಲಾಗಿದೆ.

ಅಝ್‌ವೀದ್ ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದದ್ ವೇಳೆ ನೇತ್ರಾವತಿ ಸೇತುವೆಯಲ್ಲಿ ಅವರ ಸ್ಕೂಟರ್ ನ ಮುಂಭಾಗ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದೆ. ಈ ವೇಳೆ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳಕೊಂಡು ಮೀನು ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌. ಇದರಿಂದ ಸವಾರ ಅಝ್‌ವೀದ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಸಮೀಪದ ಆಸ್ಲತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಸವಾರ ಅಝ್‌ವೀದ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ‌. ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು