ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ : ನೆರಿಯದ ಪಂಚಾಯತ್ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರು ಅಮಾನತು!

Twitter
Facebook
LinkedIn
WhatsApp
ಬೆಳ್ತಂಗಡಿ : ನೆರಿಯದ ಪಂಚಾಯತ್ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರು ಅಮಾನತು!

ಬೆಳ್ತಂಗಡಿ ಅಕ್ಟೋಬರ್ 04: ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ.

ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ) , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ) ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದೆ.

ಧರ್ಮಸ್ಥಳ ಈಗ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ – ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘೋಷಣಾ ಫಲಕ ಅನಾವರಣ ಮಾಡಿ ಅಧಿಕೃತ ಘೋಷಣೆ ಪ್ರಕಟಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯೊಂದಿಗೆ ಅವರ ತ್ವ ಆದರ್ಶಗಳನ್ನು ನಾವು ಪಾಲಿಸಬೇಕು. ಬೀದರ್, ಕಲಬುರ್ಗಿ, ಮಂಗಳೂರು, ಮೈಸೂರು ಮತ್ತು ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳನ್ನಾಗಿ ಮಾಡಲು ಆಯ್ಕೆ ಮಾಡಿದ್ದು ಧರ್ಮಸ್ಥಳ ಗ್ರಾಮ ಪಂಚಾಯಿತಿಯನ್ನು ಅಭಿನಂದಿಸಿ ಧರ್ಮಸ್ಥಳದ ಮೂಲಕ ಇಡಿ ಕರ್ನಾಟಕ ರಾಜ್ಯವೇ ದೇಶದ ಪ್ರಥಮ ಪ್ಲಾಸ್ಟಿಕ್ ಮುಕ್ತ ರಾಜ್ಯವಾಗಲಿ ಎಂದು ಹೆಗ್ಗಡೆ ಹಾರೈಸಿದರು.

ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎ೦ಬಚತುರ್ವಿಧದಾನಗಳು ನಿತ್ಯೋತ್ಸವವಾಗಿರುವಧರ್ಮಸ್ಥಳದಲ್ಲಿ ಸ್ಥಳೀಯರು ಹಾಗೂ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಧರ್ಮಸ್ಥಳವು ದೇಶದ ಉತ್ತಮ ಸ್ವಚ್ಛ ಧಾರ್ಮಿಕ ಶ್ರದ್ಧಾ ಕೇಂದ್ರ ಎಂಬ ಗೌರವಕ್ಕೆ ಪಾತ್ರವಾಗಿದ್ದು ಧರ್ಮಸ್ಥಳದಲ್ಲಿ ಬೀಡಿ, ಸಿಗರೇಟು, ಮದ್ಯ ಮಾರಾಟ ಇರುವುದಿಲ್ಲ. ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ. ಧರ್ಮಸ್ಥಳದಲ್ಲಿ ಬೀಡಿ, ಸಿಗರೇಟು, ಮದ್ಯ ಮಾರಾಟ ಇರುವುದಿಲ್ಲ. ಈಗಾಗಲೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು