ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಬೆಂಬಲದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ SDPI ವಶಕ್ಕೆ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ!

Twitter
Facebook
LinkedIn
WhatsApp
ಬಿಜೆಪಿ ಬೆಂಬಲದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ SDPI ವಶಕ್ಕೆ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ!

ಉಳ್ಳಾಲ, ಆ 10: ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷಿತ ಅಭ್ಯರ್ಥಿಯಾಗಿದ್ದ ಸತ್ಯರಾಜ್‌ ಪರಾಭವಗೊಂಡಿದ್ದಾರೆ.

ಗ್ರಾಮದ ಆಡಳಿತದಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್‌ ಹಾಗೂ 10 ಎಸ್‌ ಡಿಪಿಐ ಬೆಂಬಲಿತರು ಸದಸ್ಯರಾಗಿದ್ದರು. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ. ಶೆಟ್ಟಿ ಮತ್ತು ಎಸ್‌ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ‌ ಟಿ ಇಸ್ಮಾಯಿಲ್‌ ಮತ್ತು ಸತ್ಯರಾಜ್‌ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಸಮಬಲ ಮತವನ್ನು ಆರಂಭದ ಹಂತದಲ್ಲಿ ಪಡೆದುಕೊಂಡಿದ್ದರು.

ನಂತರ ಚುನಾವಣಾಧಿಕಾರಿಗಳ ಆದೇಶದಂತೆ ಚೀಟಿ ಎತ್ತುವ ಪ್ರಕ್ರಿಯೆಯಲ್ಲಿ ಟಿ.ಇಸ್ಮಾಯಿಲ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತರ ಸಂಖ್ಯೆ ಹೆಚ್ಚಿದ್ದರೂ , ಅಲ್ಲಿದ್ದ ಇಬ್ಬರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಮಬಲ ಬಂದಿದೆ. ಬಿಜೆಪಿಯ ಸತ್ಯರಾಜ್‌ ಅವರು ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ಬೇರೆ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ನಿರಾಶೆಗೊಂಡರು. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.

ಮಂಗಳೂರು: ‘ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ’ – ಬಿಜೆಪಿಯಿಂದ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು, ಆ 10: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷದ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಅವರು ಆಗಸ್ಟ್ 10 ರ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದ್ವೇಷದ ರಾಜಕೀಯ ಮಾಡುತ್ತಿದೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಪಂನ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಪಂಚಾಯತ್ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ತಾಪಂ ಇಒ ಮತ್ತು ಗ್ರಾಪಂ ಪಿಡಿಒರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಸ್ಥಳೀಯ ಆಡಳಿತದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದೆ. ಅಮಾನತುಗೊಂಡಿರುವ ಅಧಿಕಾರಿಗಳನ್ನು ಮೂರು ದಿನದೊಳಗೆ ಸೇವೆಗೆ ಮರು ಸೇರ್ಪಡೆಗೊಳಿಸದಿದ್ದಲ್ಲಿ ಆ.14ರಂದು ಡಿಸಿ ಕಚೇರಿ ಎದುರು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್ ಮತ್ತು ರಾಜೇಶ್ ನಾಯ್ಕ್ ಮಾತನಾಡಿದರು.

ಶಾಸಕ ಭರತ್ ಶೆಟ್ಟಿ, ಎಂಎಲ್ಸಿ ಪ್ರತಾಪಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು