ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

College Video ಘಟನೆ: ಉಡುಪಿಗೆ ಭೇಟಿ ನೀಡಿದ ಖುಷ್ಬೂ ಸುಂದರ್

Twitter
Facebook
LinkedIn
WhatsApp
97

ಉಡುಪಿ: ವಾಶ್‌ ರೂಮ್‌ ನಲ್ಲಿ ಬಾಲಕಿಯರ ವಿಡಿಯೋ ಚಿತ್ರೀಕರಿಸಿದ ಘಟನೆ ವರದಿಯಾದ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ ನೀಡಿದ್ದಾರೆ.

ಜುಲೈ 27 ರಂದು (ಗುರುವಾರ) ಬೆಳಿಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚೀಂದ್ರ ಮತ್ತು ಆಯೋಗದ ಇತರ ಅಧಿಕಾರಿಗಳೊಂದಿಗೆ ಖುಷ್ಬೂ ಅವರು ಘಟನೆಯ ಕುರಿತಾಗಿ ಮಾಹಿತಿ ಪಡೆದುಕೊಳ್ಳಲು  ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿದರು.

ಅವರು ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಅಪರಾಧಿ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಘಟನ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದ್ದಾರೆ.

ಬುಧವಾರ ಸಂಜೆ ನಗರಕ್ಕೆ ಆಗಮಿಸಿದ್ದ ಖಷ್ಟೂ ಅವರು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಜತೆ ಮಾತುಕತೆ ನಡೆಸಿದ ಅವರು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ಒಂದು ನಿರ್ದಿಷ್ಟ ಕೋಮಿನ ಮಹಿಳೆಯ ರಕ್ಷಣೆಗೆ ನಾವು ಬಂದಿಲ್ಲ. ಪ್ರಕರಣಕ್ಕೆ ಕೋಮು ಬಣ್ಣ ಬಳಿಯಬೇಡಿ ಎಂದು ಹೇಳಿದ್ದರು.

ಈ ಪ್ರಕರಣದ ಅನೇಕ ಸಂಗತಿಗಳ ತನಿಖೆ ಆಗಬೇಕಿದೆ. ಪೂರಕ ಸಾಕ್ಷಿಗಳನ್ನು ಸಂಗ್ರಹಿಸಬೇಕಿದೆ. ಈ ಘಟನೆಯನ್ನು ಇಟ್ಟುಕೊಂಡು ಅನೇಕ ಫೇಕ್‌ ವೀಡಿಯೋಗಳು ಹರಿದಾಡುತ್ತಿದ್ದು, ಅವು ಯಾವುದೂ ಸತ್ಯವಲ್ಲ ಎಂದಿದ್ದ ಅವರು, ಪೊಲೀಸರು ಈಗಾಗಲೇ ಮೂರು ಮೊಬೈಲ್‌ಗ‌ಳ ಡಾಟಾ ಸಂಗ್ರಹಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್‌ಗ‌ಳನ್ನು ಕಳುಹಿಸಬೇಕಾಗಿದೆ. ಅಲ್ಲಿ ಸಾಕ್ಷ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಹೇಳಿದರು.

ಈ ಪ್ರಕರಣದಲ್ಲಿ ಭಾಗಿಯಾದ ಮೂವರರನ್ನು ಅಮಾನತು ಮಾಡಲಾಗಿದೆ. ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆಯಲ್ಲ. ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ ಬದಲಾಗಿ ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ. ಯಾವುದೇ ರಾಜಕೀಯ ಒತ್ತಡವಿಲ್ಲದೆ ತನಿಖೆ ನಡೆಸುತ್ತೇವೆ ಎಂದು ಬುಧವಾರ ಹೇಳಿದ್ದರು.

ಉಡುಪಿ ಕಾಲೇಜು ಘಟನೆ: ಎಬಿವಿಪಿ ಪ್ರತಿಭಟನೆ; ಪೊಲೀಸರೊಂದಿಗೆ ವಾಗ್ವಾದ

ಉಡುಪಿ: ಖಾಸಗಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು