Dakshina kannnada: ದಕ್ಷಿಣ ಕನ್ನಡದಲ್ಲಿ ನಾಳೆ (ಜು. 26) ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
Dakshina kannada: ಕರಾವಳಿಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ನಾಳೆಯೂ(ಜು. 26) ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ(Holiday declared) . ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಹಾನಿ ಸಂಭವಿಸಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ
Dakshina kannada ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರಿಗೆ ನಾಳೆ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ :
ಕರಾವಳಿಯಲ್ಲಿ ವರುಣಾರ್ಭಟ ಜೋರಾಗಿದ್ದು, ನಾಳೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಯಾದ ಚಿಕ್ಕಮಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್‌ನಲ್ಲಿ ಮಳೆಯ ಪ್ರಮಾಣ, 204.5 ಮಿಮೀ ಗೂ ಅಧಿಕ ಪ್ರಮಾಣದ ಮಳೆ ಬೀಳುತ್ತದೆ. ಇದರೊಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.
ಭಾರೀ ಮಳೆಯಾಗುವ ಜಿಲ್ಲೆಗಳು
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಎಲ್ಲೋ ಅಲರ್ಟ್ ನೀಡಲಾಗಿದೆ. ಅಂದರೆ ಮಳೆಯ ಪ್ರಮಾಣ 64.5 ಮಿಮೀ ನಿಂದ 115.5 ಮಿಮೀ ಮೀಟರ್‌ವರೆಗೂ ಇರಲಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಆಗಲಿದೆ. ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ
ಮಳೆ ಅನಾಹುತಗಳು:
ದಾವಣಗೆರೆ ಜಿಲ್ಲೆಯಲ್ಲಿ ನಿರಂತರ ಕುಂಭದ್ರೋಣ ಮಳೆ ಪರಿಣಾಮದಿಂದಾಗಿ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ
ಮನೆ ಗೋಡೆ ಕುಸಿದು ಹೆಣ್ಣು ಮಗು ಸಾವನ್ನಪ್ಪಿದೆ. ತಂದೆಗೆ ಗಾಯವಾಗಿದ್ದು, ಜಿಲ್ಲಾ ಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಳೆಗೆ ಸಂಪೂರ್ಣವಾಗಿ ಮನೆ ಶಿಥಿಲಗೊಂಡಿದ್ದ ಕಾರಣ, ರಾತ್ರಿ ವೇಳೆ ಕೆಂಚಪ್ಪ, ಮಗು ಸ್ಪೂರ್ತಿ ಹಾಗೂ ಪತ್ನಿ ಲಕ್ಷ್ಮಿ ಮಲಗಿಕೊಂಡ ವೇಳೆ ಗೋಡೆ ಕುಸಿದಿದೆ. ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಪೂರ್ತಿ(01) ಸಾವನ್ನಪ್ಪಿದ ದುರ್ದೈವಿ ಹೆಣ್ಣು ಮಗು ಹಾಗೂ ಕೆಂಚಪ್ಪ (32) ಗಾಯಗೊಂಡ ತಂದೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾವಣಿ ಕುಸಿದು ವೃದ್ಧೆ ಸಾವು:
ವಿಜಯಪುರ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಚಾವಣಿ ಕುಸಿದು ವೃದ್ದೆ ಮೃತಪಟ್ಟ ಘಟನೆ ತಾಲೂಕಿನ ಕನ್ನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಶಿವಮ್ಮ ಸಾವಳಗಿ (60) ಮೃತಪಟ್ಟ ವಯೋವೃದ್ಧೆ. ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಚಾವಣಿ ಕುಸಿದಿದ್ದರಿಂದ ಅದರಡಿ ಸಿಲುಕಿ ವೃದ್ಧೆ ಮೃತಪಟ್ಟಿದ್ದಾಳೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.