ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Dakshina kannnada: ದಕ್ಷಿಣ ಕನ್ನಡದಲ್ಲಿ ನಾಳೆಯೂ ಜು.27 ರಂದು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!

Twitter
Facebook
LinkedIn
WhatsApp
Dakshina kannnada: ದಕ್ಷಿಣ ಕನ್ನಡದಲ್ಲಿ ನಾಳೆಯೂ ಜು.27 ರಂದು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!

Dakshina kannada: ಕರಾವಳಿಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ನಾಳೆಯೂ ಜು. 27 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (Holiday declared) . ಪಿಯುಸಿ, ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಕೇವಲ ಶಾಲೆಗಳಿಗೆ ಮಾತ್ರ ರಜೆ ಎಂದು ಉಲ್ಲೇಖಿಸಿದ್ದಾರೆ.  ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಹಾನಿ ಸಂಭವಿಸಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ

Dakshina kannada ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Dakshina kannnada: ದಕ್ಷಿಣ ಕನ್ನಡದಲ್ಲಿ ನಾಳೆಯೂ ಜು.27 ರಂದು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!
ಕುಂದಾಪುರ: ಕೊಚ್ಚಿಹೋದ ತೆಗ್ಗರ್ಸೆ ಕಿರುಸೇತುವೆ ಸ್ಥಳಕ್ಕೆ ಡಿಸಿ ಭೇಟಿ – ತಾತ್ಕಾಲಿಕ ಸೇತುವೆ ನಿರ್ಮಾಣ ಭರವಸೆ:

ಕುಂದಾಪುರ, ಜು 27 : ಎರಡು ದಿನಗಳ ಹಿಂದೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಸಮೀಪದ ನೀರೋಡಿ ಎಂಬಲ್ಲಿ ಕೊಚ್ಚಿ ಹೋದ ಕಿರುಸೇತುವೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಿಸಲಾಗಿತ್ತು. ಈ ವರ್ಷದ ಆರಂಭದ ಮಳೆಗೆ ಈ ಕಿರು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಈ ರಸ್ತೆಯೇ ಆಧಾರವಾಗಿತ್ತು.

ಈ ಬಗ್ಗೆ ಪ್ರಕಟಗೊಂಡ ವರದಿಗೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಬೈಂದೂರಿ ತಹಸೀಲ್ದಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ಮೊದಲಾದವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಇಲ್ಲಿ ತಕ್ಷಣದಿಂದ ಸ್ಟೀಲ್ ಸೇತುವೆ ನಿರ್ಮಿಸಿ ಸ್ಥಳೀಯರ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕಡಿಮೆಯಾದ ಬಳಿಕ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದರು.

ಈ ಸಂದರ್ಭ ಸಾಮಾಜಿಕ ಹೋರಾಟಗಾರ ವೀರಭದ್ರ ಗಾಣಿಗ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಯ್ಯ ಪೂಜಾರಿ, ವಾಸು ಮರಾಠಿ ಹಾಜರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು