ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಟ್ಸಪ್ ನಲ್ಲಿ ಮಂಗಳೂರು ಕಮಿಷನರ್ ಫೋಟೋ ಬಳಸಿ ಹಣಕ್ಕೆ ಡಿಮ್ಯಾಂಡ್!

Twitter
Facebook
LinkedIn
WhatsApp
ವಾಟ್ಸಪ್ ನಲ್ಲಿ ಮಂಗಳೂರು ಕಮಿಷನರ್ ಫೋಟೋ ಬಳಸಿ ಹಣಕ್ಕೆ ಡಿಮ್ಯಾಂಡ್!

ಮಂಗಳೂರು (ಅ.27): ಫೇಸ್ ಬುಕ್, ಇನ್ಸ್ಟಾಗ್ರಾಂಗಳಲ್ಲಿ‌ ನಕಲಿ ಖಾತೆಗಳನ್ನು ತೆರೆದು ಹಣಕ್ಕೆ ಬೇಡಿಕೆಯಿಡೋ ಜಾಲ ಸದ್ಯ ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲೂ ಸುಲಿಗೆಗೆ ಇಳಿದಿದೆ. ಆದರೆ ಈ ಬಾರಿ ವಾಟ್ಸಪ್ ನಲ್ಲಿ ಕಮಿಷನರ್ ಫೋಟೋ ಬಳಸಿ ಹಣ ಕೀಳಲು ಯತ್ನಿಸಿದ್ದು, ನಕಲಿ ಖಾತೆಯ ಬಗ್ಗೆ ಎಚ್ಚರವಾಗಿರಿ ಅಂತ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದು, ವಾಟ್ಸಪ್ ನಲ್ಲಿ ಕಮಿಷನರ್ ಫೋಟೋ ಬಳಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಫೋಟೋ ದುರ್ಬಳಕೆ ಮಾಡಲಾಗಿದ್ದು, ಅನುಪಮ್ ಅಗರ್ವಾಲ್ ಹೆಸರಲ್ಲಿ ಹಲವರಿಗೆ ವಾಟ್ಸಪ್ ಸಂದೇಶ ರವಾನೆಯಾಗಿದೆ. ಆಸ್ಪತ್ರೆಯಲ್ಲಿರೋದಾಗಿ ಹೇಳಿ ಹಣ ಕಳುಹಿಸಿಕೊಡುವಂತೆ ಸಂದೇಶ ಕಳುಹಿಸಲಾಗಿದ್ದು, ಯುಪಿಐ ಕೆಲಸ ಮಾಡ್ತಿಲ್ಲ, ಸ್ವಲ್ಪ ಹಣ ಇದ್ದರೆ ಕೊಡಿ, ಒಂದು ಗಂಟೆಯಲ್ಲಿ ವಾಪಾಸ್ ಕೊಡ್ತೀನಿ ಅಂತ ಕಮಿಷನರ್ ಹೆಸರಿನಲ್ಲಿ ಮೆಸೇಜ್ ಹಾಕಲಾಗಿದೆ. 

ಮಂಗಳೂರಿನ ಹಲವರಿಗೆ ಕಮಿಷನರ್ ಹೆಸರಲ್ಲಿ ಸಂದೇಶ ರವಾನೆ ಯಾಗಿದ್ದು, ಮಂಗಳೂರು ಕಮಿಷನರ್ ಅಧಿಕೃತ ವಾಟ್ಸಪ್ ಖಾತೆಯ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿಸಲಾಗಿದೆ. 8319051976 ನಂಬರ್ ನಲ್ಲಿ ಕಮಿಷನರ್ ಫೋಟೋ ಬಳಸಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿದ್ದು, ಈ ನಕಲಿ ಖಾತೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ. ಯಾರೂ ಹಣ ನೀಡದಂತೆ ಸಾರ್ವಜನಿಕರಿಗೆ ಕಮಿಷನರ್ ಮನವಿ ಮಾಡಿದ್ದು, ಈ ಬಗ್ಗೆ ಕ್ರಮಕ್ಕೆ ಕಮಿಷನರ್ ಅನುಪಮ್ ಅಗರ್ವಾಲ್ ಸೈಬರ್ ಕ್ರೈಂಗೆ ಸೂಚನೆ ನೀಡಿದ್ದಾರೆ.

“Hi sir Good Morning I’m COMMISSIONER

ANUPAM AGRAWAL IPS

Today is the first time I have some work for you, don’t refuse. If you ever need anything in your life, let me know. Sir I’m in hospital And my upi is not working i need some money can you transfer i will return within 1 hour..”

ಬಂಟ್ವಾಳ: ಹುಲಿವೇಷ ಟೀಂ ಸಂಘರ್ಷ, ಮೂವರಿಗೆ ಚೂರಿ ಇರಿತ!

ಮಂಗಳೂರು (ಅ.27): ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದ್ದು, ಹುಲಿವೇಷ ಟೀಂ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ‌ ನಡೆದಿದೆ.

ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ , ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೇ ಚೂರಿಯಿಂದ ಇರಿದಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಏನಿದು ಹುಲಿವೇಷ ಟೀಂ ಸಂಘರ್ಷ?
   
ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಚೂರಿ ಇರಿತದವರೆಗೆ ಮುಂದುವರಿದಿದೆ. ಕೆಲ ವರ್ಷಗಳ ಹಿಂದೆ ಜೊತೆಯಾಗಿಯೇ ಹುಲಿವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿತ್ತು. ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತಿದೆ. 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು