ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ : ಚಿಕ್ಕಂದಿನಿಂದಲೇ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ನಟೋರಿಯಸ್ ಕಳ್ಳ ಅರೆಸ್ಟ್..!

Twitter
Facebook
LinkedIn
WhatsApp
ಬೆಳ್ತಂಗಡಿ : ಚಿಕ್ಕಂದಿನಿಂದಲೇ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ನಟೋರಿಯಸ್ ಕಳ್ಳ ಅರೆಸ್ಟ್..!

ಬೆಳ್ತಂಗಡಿ ಸೆಪ್ಟೆಂಬರ್ 29: ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್​ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಉಮೇಶ್​ ಬಳೆಗಾರನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.26 ರಂದು ಉಮೇಶ್​ನನ್ನು ಮೈಸೂರು ಜಿಲ್ಲೆಯ ಝೂ ಪಾರ್ಕ್​ನಲ್ಲಿ ವಶಕ್ಕೆ ಪಡೆದ ಪೊಲೀಸರು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿ ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಆರೋಪಿಯಿಂದ ಕದ್ದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಉಮೇಶ್ ಬಳೆಗಾರ ಮೂಲತಃ ಆಂದ್ರಪ್ರದೇಶದವನಾಗಿದ್ದು, ಮೊದಲ ಪತ್ನಿಗೆ ಮೂವರು ಮಕ್ಕಳಿದ್ದಾರೆ. ಮಕ್ಕಳು ಕೂಡ ಕಳ್ಳತನದಲ್ಲಿ ತೊಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

ಬಡಗನ್ನೂರು – ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ – 6 ಮಂದಿ ಅರೆಸ್ಟ್

ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳು.

ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈಯವರನ್ನು ಹಗ್ಗ ಮತ್ತು ಬಟ್ಟೆಯಿಂದ ಕಟ್ಟಿ ಬಾಯಿಯನ್ನು ಬಿಗಿದು ಕತ್ತಿನ ಭಾಗಕ್ಕೆ ಮಾರಕಾಸ್ತ್ರಗಳನ್ನು ಇಟ್ಟು ಬೆದರಿಸಿ 30 ಸಾವಿರ ರೂ.ನಗದು ಮತ್ತು ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಕಸ್ತೂರಿ ರೈಯವರನ್ನು ಬೆದರಿಸಿ ಅವರ ಕೈಯಿಂದಲೇ ಬೀಗದ ಕೀ ಪಡೆದುಕೊಂಡು ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ದೋಚಿ ತಂಡ ಪರಾರಿಯಾಗಿತ್ತು.

ಪ್ರಕರಣದ ತನಿಖೆಗಾಗಿ ಎಸ್ ಪಿ ಸಿ.ಬಿ ಋಷ್ಯಂತ ವಿಶೇಷ ತಂಡ ರಚಿಸಿದ್ದರು, ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳಲ್ಲಿ ಪಚ್ಚಂಬಳ ರವಿ ಪೆರ್ಲದ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ. ಇತ್ತೀಚೆಗೆ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಂಧಿತ ಆರೋಪಿಗಳಿಂಗ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆಯಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು