ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ - ಇಬ್ಬರು ಅಪಾಯದಿಂದ ಪಾರು

Twitter
Facebook
LinkedIn
WhatsApp
ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ - ಇಬ್ಬರು ಅಪಾಯದಿಂದ ಪಾರು

ಮುಲ್ಕಿ, ಆ 08 : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್ ಮಾಡಿಕೊಂಡು ಬರುತ್ತಿದ್ದ ಪಿಕಪ್ ಮುಲ್ಕಿ ಬಸ್ಸು ನಿಲ್ದಾಣದ ಜಂಕ್ಷನ್ ತಲುಪುತ್ತಿದ್ದಂತೆ ಕಿನ್ನಿಗೋಳಿ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಪಿಕಪ್ ಎದುರು ಭಾಗ ಜಖಂಗೊಂಡಿದ್ದು ಅದರಲ್ಲಿದ್ದ ಕೇರಳ ಕಣ್ಣೂರು ನಿವಾಸಿಗಳಾದ ಚಾಲಕ ಲುಕ್ಮಾನ್ ಹಾಗೂ ನಿರ್ವಾಹಕ ರಂಜಾದ್ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.

ಸುಳ್ಯ: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು

ಸುಳ್ಯ, ಆ 08: ಅರಂತೋಡಿಯಲ್ಲಿ ಪಾದಚಾರಿಗೆ ಓಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಉಳುವಾರು ನಿವಾಸಿ ತೀರ್ಥರಾಮ ಮೃತಪಟ್ಟ ವ್ಯಕ್ತಿ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ.

ಈ ಬಗ್ಗೆ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು