Kadaba : ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
Twitter
Facebook
LinkedIn
WhatsApp

ಕಡಬ: ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7ರಂದು ಮೃತಪಟ್ಟಿದ್ದಾರೆ.
ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.
ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸುಳ್ಯ – ಪಾಂಡಿಚೇರಿಯಲ್ಲಿ ಸಮುದ್ರಪಾಲಾದ ಪಂಜದ ಯುವಕ ಬಿಪಿನ್
ಸುಳ್ಯ ನವೆಂಬರ್ 06 : ಪಾಂಡಿಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪಂಜದ ಯುವಕನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ.
ಮೃತರನ್ನು ಪಂಜ ಸಮೀಪದ ಕೂತ್ಕುಂಜ ಬಿಪಿನ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಗೆಳೆಯರೊಂದಿಗೆ ಶನಿವಾರ ಪಾಂಡಿಚೇರಿಗೆ ಹೋಗಿದ್ದ. ರವಿವಾರ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಮೃತದೇಹ ಪತ್ತೆಯಾಗಿದ್ದು, ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.