ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ

Twitter
Facebook
LinkedIn
WhatsApp
ಕಾರ್ಕಳ: ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ

ಕಾರ್ಕಳ, ಆ 02: ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಸಂಘಟನೆಯೊಂದರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಬಂದ ಮತ್ತೊಂದು ಕಾರು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದನೆಗೈದು ಬೆದರಿಕೆಯೊಡ್ಡಿದ್ದರು.

ಇನ್ನು ಪ್ರಯಾಣಿಕರ ಕಾರಿನಲ್ಲಿ ಇದ್ದ ಸುಮಾರು 36,38 ವರ್ಷ ಪ್ರಾಯದ ಮಹಿಳೆಯರು ನೇರವಾಗಿ 112ಗೆ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ , ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ತೆರಳಿ ನೈತಿಕ ಪೊಲೀಸ್ ಗಿರಿ ತೋರ್ಪಡಿಸಿದ ಐವರು ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಂತೋಷ್ ನಂದಳಿಕೆ,ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ‌.

ಸ್ಥಳದಲ್ಲಿ ಬಿಗುವಾತಾವರಣ ಇದ್ದುದರಿಂದ ಕಾರ್ಕಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ.

ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ – ಆರೋಪಿ ಪೊಲೀಸರ ವಶಕ್ಕೆ

ಬಂಟ್ವಾಳ, ಆ 02: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ ( 32) ಎಂದು ಗುರುತಿಸಲಾಗಿದೆ.

ಅಬ್ದುಲ್ ಸಲೀಂ ಸಜೀಪ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ನಂದಾವರ ಜಂಕ್ಷನ್ ನಲ್ಲಿ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದು, ಗಾಂಜಾ ಸೇವನೆ ದೃಢಪಟ್ಟಿದು, ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು