ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ ನಾಪತ್ತೆ!

Twitter
Facebook
LinkedIn
WhatsApp
ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ ನಾಪತ್ತೆ!

ಪಡುಬಿದ್ರಿ ಅಕ್ಟೋಬರ್ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.

ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದಾರೆ. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್‌ ಕಾನ್‌ಸ್ಟೇಬಲ್ ಆಗಿ ಬಂದಿದ್ದರು. ಸದ್ಯ ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ. 178ಸೆ.ಮೀ. ಎತ್ತರ, ದೃಢಕಾಯದ ಶೃತಿನ್ ಶೆಟ್ಟಿ ತುಳು, ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳನ್ನು ಮಾತಾಡುತ್ತಾರೆ. ಇವರ ಗುರುತು, ಪರಿಚಯ ಯಾರಿಗಾದರೂ ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (0820 2555452)ಯನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಮಂಗಳೂರು – ಬಿಲ್ ಪಾವತಿಗೆ 15% ಕಮಿಷನ್ ಲಂಚ ತೆಗೆದುಕೊಳ್ಳುವಾಗ ಸಿಕ್ಕಿಹಾಕಿಕೊಂಡ ಕೃಷಿ ಇಲಾಖೆ ಅಧಿಕಾರಿ

ಮಂಗಳೂರು ಅಕ್ಟೋಬರ್ 21: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.

2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ ಗಿಡಗಳನ್ನು ನೀಡಲಾಗಿತ್ತು. ಇದನ್ನು ಕೆಲವು ನರ್ಸರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು, ಅಲ್ಲದೆ ಅರಣ್ಯ ಇಲಾಖೆ ಗುತ್ತಿಗೆದಾರರಿಂದ ಗಿಡಗಳನ್ನು ನಾಟಿ ಮಾಡಿಸಿತ್ತು. ಈ ಒಟ್ಟಾರೆ ಕಾಮಗಾರಿಗೆ 50 ಲಕ್ಷದಷ್ಟು ಹಣ ಸರಕಾರದಿಂದ ಬರಬೇಕಾಗಿತ್ತು.

ಈ ಹಿನ್ನಲೆ ಕೃಷಿ ಇಲಾಖೆಯಲ್ಲಿ ಅಂದು ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ಪರಮೇಶ್ ಎನ್.ಪಿ ಅವರು ಬಿಲ್ ಬಾಕಿ ಪಾವತಿಗೆ ಮಂಗಳೂರು ವಿಭಾಗದ ಉಪಕೃಷಿ ನಿರ್ದೇಶಕರಾದ ಶ್ರೀಮತಿ ಭಾರತಮ್ಮ ಅವರಲ್ಲಿ ಕೇಳಿಕೊಂಡಿದ್ದಾರೆ. ಈ ವೇಳೆ ಅಧಿಕಾರಿ ಭಾರತಮ್ಮ ಅವರು ಬಿಲ್ ಪಾವತಿಸಬೇಕಾದರೆ ಬಿಲ್ ಮೊತ್ತದ 15 % ಹಣವನ್ನು ಮುಂಗಡವಾಗಿ ನನಗೆ ಲಂಚದ ರೂಪದಲ್ಲಿ ನೀಡಬೇಕು ಇಲ್ಲವಾದರೇ ನಾನು ಬಿಲ್ ಪಾವತಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಹಿನ್ನಲೆ ಪರಮೇಶ್ ಅವರು ಅಕ್ಟೋಬರ್ 20 ರಂದು ಮತ್ತೆ ಅಧಿಕಾರಿ ಭಾರತಮ್ಮ ಅವರ ಹತ್ತಿರ ಮಾತನಾಡಿದಾಗ ಬಿಲ್ ಪಾವತಿಗೆ 1 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಮೇಶ್ ಅವರು ಲೋಕಾಯುಕ್ತ ದೂರು ನೀಡಿದ್ದರು. ಇಂದು ಮಂಗಳೂರು ಉಪ ಕೃಷಿ ನಿರ್ದೇಶಕಿಯಾದ ಶ್ರೀಮತಿ ಭಾರತಮ್ಮ ಅವರು ಪರಮೇಶ್ ಅವರಿಂದ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು