ಭಾನುವಾರ, ನವೆಂಬರ್ 24, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Kerala: ಕೇರಳದಲ್ಲಿ ತನ್ನ ಅಜ್ಜ-ಅಜ್ಜಿಯನ್ನು ಕೊಂದು ಅವರ ಚಿನ್ನಾಭರಣಗಳನ್ನು ಮಂಗಳೂರಿಗೆ ಮಾರಲು ಬಂದ ಯುವಕ ಅರೆಸ್ಟ್!

Twitter
Facebook
LinkedIn
WhatsApp
Kerala: ಕೇರಳದಲ್ಲಿ ತನ್ನ ಅಜ್ಜ-ಅಜ್ಜಿಯನ್ನು ಕೊಂದು ಅವರ ಚಿನ್ನಾಭರಣಗಳನ್ನು ಮಂಗಳೂರಿಗೆ ಮಾರಲು ಬಂದ ಯುವಕ ಅರೆಸ್ಟ್!

ಮಂಗಳೂರು ಜುಲೈ 26: ಕೇರಳದಲ್ಲಿರುವ ತನ್ನ ಅಜ್ಜ ಅಜ್ಜಿಯನ್ನು ಕೊಂದು ಅವರ ಚಿನ್ನಾಭರಣಗಳನ್ನು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ‘ಕೇರಳದ ತ್ರಿಶ್ಶೂರ್ ಜಿಲ್ಲೆಯ ವೈಲತ್ತೂರು ಪನಾಂಗೈಲ್ ಹೌಸ್‌ನ ನಿವಾಸಿ ಅಹಮ್ಮದ್ ಅಕ್ಮಲ್ (27)ಎಂದು ಗುರುತಿಸಲಾಗಿದೆ.

 ಆರೋಪಿ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸೋಮವಾರ ಬೆಳಿಗ್ಗೆ ಬಂದರು ಠಾಣೆಯ ಪೊಲೀಸರಿಗೆ ಮಾಹಿತಿ ಬಂದಿತ್ತು. ಠಾಣಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ತಾನು ಕೇರಳದ ತ್ರಿಶ್ಶೂರ್‌ ಜಿಲ್ಲೆಯವನು ಎಂದು ಆತ ತಿಳಿಸಿದ್ದ. ‌ಆತನ ವರ್ತನೆಯಿಂದ ಅನುಮಾನಗೊಂಡು, ಮತ್ತಷ್ಟು ವಿಚಾರಣೆ ನಡೆಸಿದಾಗ, ಅಜ್ಜ ಅಜ್ಜಿಯನ್ನು ಕೊಂದು ಚಿನ್ನಾಭರಣಗಳೊಂದಿಗೆ ಬಂದಿರುವುದನ್ನು ಆತ ಒಪ್ಪಿಕೊಂಡ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ಮುತ್ತು ಪೋಣಿಸಿದ ಎರಡು ಎಳೆಯ ಚಿನ್ನದ ಸರ, ಸಣ್ಣ ಪದಕವಿರುವ ಚಿನ್ನದ ಸರ, ಮೂರು ಕಿವಿಯೋಲೆಗಳು, ಐದು ಉಂಗುರಗಳು, ಎರಡು ಬಳೆಗಳು, ಪಾಸ್‌ಪೋರ್ಟ್‌ ಹಾಗೂ ಇತರ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

abcd….

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು