ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಂಕಣಿ ಲೇಖಕ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ ನಿಧನ

Twitter
Facebook
LinkedIn
WhatsApp
ಕೊಂಕಣಿ ಲೇಖಕ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ ನಿಧನ

ಮಂಗಳೂರು ಅ.26: ಹಿರಿಯ ಕೊಂಕಣಿ ಲೇಖಕ, ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ (75) ನಿನ್ನೆ ನಿಧನರಾದರು.ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನಗರದ ವೆಲೆನ್ಸಿಯಾದ ನಿವಾಸಿಯಾಗಿದ್ದ ಅವರು ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನಲ್ಲಿ ಕಲಿತರು. ವಾಣಿಜ್ಯ ದಲ್ಲಿ ಪದವಿ ಮತ್ತು ಕೊಂಕಣಿಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದ ಅವರು ಯುನೈಟೆಡ್ ಸ್ಟೇಟ್ಸ್‌ನ ಬೈಬಲ್ ಸ್ಕೂಲ್‌ನಿಂದ ಐದು ಅನ್‌ಲೈನ್‌ ಡಿಪ್ಲೊಮಾಗಳನ್ನು ಕ್ರಿಶ್ಚಿಯನ್ ರಿಯಾಲಜಿಯಲ್ಲಿ ಪರಿಣತಿ ಪಡೆದರು.

1944ರಲ್ಲಿ ಸಣ್ಣ ಕಥೆಯನ್ನು ಕೊಂಕಣಿಯಲ್ಲಿ ಬರೆಯಲು ಆರಂಭಿಸಿದ ಅವರು ಬಳಿಕ 33 ಕಾದಂಬರಿಗಳು, 100ಕ್ಕೂ ಅಧಿಕ ಸಣ್ಣ ಕಥೆಗಳನ್ನು ಬರೆದಿದ್ದಾರೆ. ಅವರ ಅನೇಕ ಸಣ್ಣ ಕಥೆಗಳು ಇಂಗ್ಲಿಷ್, ಕನ್ನಡ, ಹಿಂದಿ, ಕಾಶ್ಮೀರಿ, ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿದೆ.

ಎಡ್ವಿನ್ ಅವರ ಸಾಹಿತ್ಯ ಕೊಡುಗೆಗಳಿಗಾಗಿ ರಾಜ್ಯ, ಅಂತರ್ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದರು. ಅವರ ಪ್ರಸಿದ್ಧ ಸಣ್ಣ ಕಥೆ ‘ಎ ಕಮ್ ಆಫ್ ಹಾಟ್ ಕಾಂ’ ಜೈಕೋ ಬುಕ್ಸ್ ಪ್ರಕಟಿಸಿದ ಭಾರತೀಯ ಸಣ್ಣ ಕಥೆಗಳು ಸಂಕಲನ ದಲ್ಲಿ ಕಾಣಿಸಿಕೊಂಡಿದೆ. ಅವರ ಹೃದಯಸ್ಪರ್ಶಿ ಸಣ್ಣ ಕಥೆ ‘ಚಾಕೊಲೇಟ್‌ಗಳು ರೀಡರ್ಸ್ ಡೈಜೆಸ್ಟ್ ಗೈಡ್ ಟು ಫುಡ್, ವಿಶೇಷ ಕಲೆಕ್ಟರ್ಸ್‌ ಎಡಿಶನ್‌ನಲ್ಲಿ ಎರಡು ಬಾರಿ ಕಾಣಿಸಿಕೊಂಡಿದೆ.

ಅನುವಾದ ಕ್ಷೇತ್ರದಲ್ಲೂ ಎಡ್ವಿನ್ ತೊಡಗಿಸಿಕೊಂಡಿದ್ದು, ಇಂಗ್ಲಿಷ್‌ನಿಂದ ಕೊಂಕಣಿಗೆ (ನಾಗರಿ/ಕನ್ನಡ ಲಿಪಿ) ಅನೇಕ ಕೃತಿಗಳನ್ನು ಅನುವಾದಿಸಿದ್ದಾರೆ. 1995ರಲ್ಲಿ ಕೊಂಕಣಿ ಚಲನಚಿತ್ರ ‘ಬಾಕ್ಸ್‌ಸೇನ್‌’ಗೆ ಸಂಭಾಷಣೆ ಬರೆದಿದ್ದಾರೆ.

ಗೋವಾ ಕೊಂಕಣಿ ಅಕಾಡೆಮಿಯು ಅವರ 450 ಪುಟಗಳ ನಾಗರಿ ಲಿಪಿಯ ಕಾದಂಬರಿ ಕಲ್ಲಿ ಭಂಗಬರ್‌ನ್ನು ಪ್ರಕಟಿಸಿತು, ಈ ಕಾದಂಬರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ 2013ರ ವರ್ಷದ ಅತ್ಯುತ್ತಮ ಪುಸ್ತಕ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಪ್ರಶಸ್ತಿ ಲಭಿಸಿದೆ.

2015ರಲ್ಲಿ ಫೆಡರೇಶನ್ ಆಫ್ ಕೊಂಕಣಿ ಕ್ಯಾಥೋಲಿಕ್ ಅಸೋಸಿಯೇಶನ್ ಅವರನ್ನು ಗೌರವಿತ್ತು ಕೊಂಕಣಿ ಕುಟಮ್ ಬಹರೈನ್ ಅವರಿಗೆ 2015ರಲ್ಲಿ ಕೊಂಕಣಿ ಸಾಹಿತ್ಯ ಜೀವಮಾನ ಪ್ರಶಸ್ತಿಯನ್ನು ನೀಡಿತು.

ಕೇಂದ್ರ ಸಾಹಿತ್ಯ ಅಕಾಡಮಿಯ (2008-2012) ಜನರಲ್ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು ಸಂಶೋಧನೆಗಾಗಿ ಫೆಲೋಶಿಪ್ ಪ್ರಶಸ್ತಿಗಳನ್ನು ನಿರ್ಧರಿಸುವ ಹೆಸರಿಲ್ಲಿಯ ಸಂಸ್ಕೃತಿ ಸಚಿವಾಲಯರ ತಜ್ಞರ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಗೋವಾ ವಿಶ್ವವಿದ್ಯಾನಿಲಯದ ಕಡೆ ಅಧ್ಯಯನ ಮಂಡಳಿಯಲ್ಲಿ ಹೆಚ್ಚುವರಿ ಯಾಗಿ ಸೇವೆ ಸಲ್ಲಿಸಿದ್ದರು. 1992ರಲ್ಲಿ ಕಾರವಾರದಲ್ಲಿ ನಡೆದ 11ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು