ಮಂಗಳೂರು : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸವಾರ ಗುರುಪುರ ನಿವಾಸಿ ಮೃತ್ಯು!
Twitter
Facebook
LinkedIn
WhatsApp
![ಮಂಗಳೂರು : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸವಾರ ಗುರುಪುರ ನಿವಾಸಿ ಮೃತ್ಯು!](https://urtv24.com/wp-content/uploads/2023/10/denzil_081023_mishap.jpg)
ಮಂಗಳೂರು: ಗಂಜಿಮುಟ್ಟಿನ ಮುಚ್ಚೂರು ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಸ್ಥಳದಲ್ಲೇ ಮೃತಪಟ್ಟವರು.ಸಚಿನ್ ಅವರು ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಇನ್ನು ಸಚಿನ್ ಪೋಷಕರು, ಒಬ್ಬ ಸಹೋದರ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಘಟನೆ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.