ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಗುದದ್ವಾರದಲ್ಲಿ ಅಕ್ರಮವಾಗಿ 20 ಲಕ್ಷ ಮೌಲ್ಯದ ಚಿನ್ನ ಸಾಗಿಸಲು ಹೋಗಿ ಸಿಕ್ಕಿಬಿದ್ದ ಮಹಿಳೆ!

Twitter
Facebook
LinkedIn
WhatsApp
ಮಂಗಳೂರು: ಗುದದ್ವಾರದಲ್ಲಿ ಅಕ್ರಮವಾಗಿ 20 ಲಕ್ಷ ಮೌಲ್ಯದ ಚಿನ್ನ ಸಾಗಿಸಲು ಹೋಗಿ ಸಿಕ್ಕಿಬಿದ್ದ ಮಹಿಳೆ!

ಮಂಗಳೂರು ಅಕ್ಟೋಬರ್ 05: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಗುದದ್ವಾರದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ.

ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 20.41 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 4 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯ ತಪಾಸಣೆ ವೇಳೆ ಡಿಟೆಕ್ಟರ್ ನಲ್ಲಿ ಬೀಪ್ ಶಬ್ದ ಬಂದಿದ್ದು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಧೃಡಪಟ್ಟಿದೆ.
ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದು, 24 ಕ್ಯಾರೆಟ್‌ನ 345 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 20,41,650 ರೂ. ಎಂದು ಅಂದಾಜಿಸಲಾಗಿದೆ.

ಕಾರ್ಕಳ – ರಬ್ಬರ್ ಸ್ಮೋಕ್ ಹೌಸ್‌ ಗೆ ಬೆಂಕಿ – ರಬರ್ ಶೀಟ್ ಗೆ ಹಾನಿ

ಕಾರ್ಕಳ ಅಕ್ಟೋಬರ್ 05:ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ ಬೆಂಕಿ ಬಿದ್ದು ರಬ್ಬರ್ ಶೀಟ್ ಗಳಿಗೆ ಹಾನಿಯಾದ ಘಟನೆ ನಡೆದಿದೆ.

ರಬ್ಬರ್ ಶೀಟ್ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ 50 ರಬ್ಬರ್ ಶೀಟ್, ಕಟ್ಟಡದ ಮೇಲ್ಬಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯ ಮೂಲ್ಯ ಕೇಶವ್, ಸುಜಯ್, ವಿನಾಯಕ್ ಪಾಲ್ಗೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು