ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಹೆತ್ತ ತಾಯಿಯನ್ನೇ ಅತ್ಯಾಚಾರಗೈದು ಕೊಂದ ವಿಕೃತಕಾಮಿ ಮಗ!

Twitter
Facebook
LinkedIn
WhatsApp
ಮಂಗಳೂರು : ಹೆತ್ತ ತಾಯಿಯನ್ನೇ ಅತ್ಯಾಚಾರಗೈದು ಕೊಂದ ವಿಕೃತಕಾಮಿ ಮಗ!

ಮಂಗಳೂರು : ಮಂಗಳೂರು ಹೊರ ವಲಯದ ಕಟೀಲು ಗಿಡಿಕೆರೆ ಮಹಿಳೆಯ ಕೊಲೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ನಡೆಸಿ ಹೇಯ ಮತ್ತು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.‌

ಹೆತ್ತ ತಾಯಿಯನ್ನೇ ಅತ್ಯಾಚಾರಗೈದು ಕೊಂದ ವಿಕೃತಕಾಮಿ ಆರೋಪಿ ಮಗನನ್ನು ಬಜಪೆ ಪೊಲೀಸರು ಸೋಮವಾರ ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಟೀಲು ಸಮೀಪದ ಕೊಂಡೆಮೂಲ ನಿವಾಸಿ ರತ್ನ ( 56 ) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ ( 33 ) ಎಂಬಾತ ಅ.26 ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ, ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾಯಿಯನ್ನು ಕೊಂದಿರುವುದು ತಾನೇ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

 ರತ್ನ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದು ಬಳಿಕ ತಾಯಿ ಮಗ ಇಬ್ಬರೇ ಕೊಂಡೆಮೂಲದ ಮನೆಯಲ್ಲಿ ವಾಸವಾಗಿದ್ದರು. ಅರೋಪಿಯು ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ , ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಕಟ್ಟಿ ಅತ್ಯಾಚಾರ ವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ. ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ.

ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿ ರವಿರಾಜ್ ಶೆಟ್ಟಿಯನ್ನು ಬಂಧಿಸಿ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು