ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ರಿಕ್ಷಾ ಡಿಕ್ಕಿ ಹೊಡೆದು ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಕಾರು ಹರಿದು ಸ್ಥಳದಲ್ಲೇ ಮೃತ್ಯು!

Twitter
Facebook
LinkedIn
WhatsApp
ಮಂಗಳೂರು : ರಿಕ್ಷಾ ಡಿಕ್ಕಿ ಹೊಡೆದು ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಕಾರು ಹರಿದು ಸ್ಥಳದಲ್ಲೇ ಮೃತ್ಯು!

ಮಂಗಳೂರು : ಸ್ಕಿಡ್ ಆಗಿ ಬಿದ್ದ ಆಕ್ಚಿವಾ ಸ್ಕೂಟರ್ ಸವಾರನ ಮೇಲೆ ಕಾರೊಂದು ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಕಾವುರು ನಿವಾಸಿ ಕೌಶಿಕ್ (21) ಮೃತ ದುರ್ದೈವಿ. ಎಜೆ ಆಸ್ಪತ್ರೆಯಿಂದ ಕೌಶಿಕ್ ಸ್ಕೂಟರ್ ನಿಂದ ಹೊರ ಬರುತ್ತಿರುವಾ ಆಟೋ ರಿಕ್ಷಾ ಒಂದು ಕೌಶಿಕ್ ಸ್ಕೂಟರ್ ಗೆ ತಾಗಿದೆ, ಈ ವೇಳೆ ಕೌಶಿಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ ಬಿದ್ದಿದ್ದಾರೆ.

ಇದೇ ಸಂದರ್ಭ ಕೌಶಿಕ್ ಮೇಲೆ ವೇಗವಾಗಿ ಬಂದ ಕಾರೊಂದು ಹರಿದ ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು ಪೂರ್ವ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆನೆದಂತ ಗಳೊಂದಿಗೆ 8 ಆರೋಪಿಗಳ ಬಂಧನ..!

ಬೆಂಗಳೂರು: ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ಆನೆ ದಂತ ಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಸಂಚಾರ ದಳ ಬಂಧಿಸಿದೆ.

ಐಯ್ಯನ್‍ಕುಟ್ಟಿ (53), ರತ್ನ(46), ಕೃಷ್ಣಮೂರ್ತಿ ಗೋಪಾಲ್(35), ನಾರಾಯಣಸ್ವಾಮಿ(50), ದಿನೇಶ್(42), ರವಿ(44), ಮನೋಹರ್ ಪಾಂಡೆ(61), ವೆಂಕಟೇಶ್(51) ರನ್ನು ಬಂಧಿತ ಆರೋಪಿಗಳಾಗಿದ್ದಾರೆ.

ವನ್ಯಜೀವಿ(ಸಂರಕ್ಷಣಾ) ಕಾಯ್ದೆ ಉಲ್ಲಂಘನೆ ಮಾಡಿ ಅಕ್ರಮವಾಗಿ ಆನೆದಂತ ಮಾರಾಟ ಯತ್ನ ನಡೆಯುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿಗಳು, ಅಪರಾಧ ನಿಯಂತ್ರಣ ದಳದ ಸಿಬ್ಬಂದಿ ಹುಣಸನಹಳ್ಳಿ-ಕನಕಪುರ ರಸ್ತೆಯ ಮರಿದೇವರದೊಡ್ಡಿ ಕ್ರಾಸ್ ಬಳಿ ವಾಹನಗಳ ತಪಾಸಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳಿಂದ ಆನೆ ದಂತದ ತುಂಡುಗಳು ಹಾಗೂ ಕೃತ್ಯದಲ್ಲಿ ಉಪಯೋಗಿಸಿದ್ದ ಬಿಳಿ ಬಣ್ಣದ ಮಹೀಂದ್ರ ಜೈಲೋ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು