ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಡಿಪು: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ -ಕಾರು ಚಾಲಕ ಪಾರು

Twitter
Facebook
LinkedIn
WhatsApp
ಮುಡಿಪು

ಮುಡಿಪು: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಇಂದು ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ‌.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ನಿಷೇಧ!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದ್ದು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಸಂಚರಿಸುವ ವಾಹನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್​ ವೇಗದ ಮಿತಿ ನಿಗದಿಪಡಿಸಲಾಗಿದೆ. ಇನ್ನು ಜುಲೈ 24ವರೆಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿವೇಗದ ಚಾಲನೆಗಾಗಿ 2,000ಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಚಿಸಿದ ಸುರಕ್ಷತಾ ಸಮಿತಿಯು ಎಕ್ಸ್‌ಪ್ರೆಸ್‌ವೇ ಸುರಕ್ಷತೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. ಮಾರ್ಚ್‌ನಲ್ಲಿ ಲೋಕಾರ್ಪಣೆಯಾದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ವರದಿಯಾಗಿವೆ. ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು