ಶುಕ್ರವಾರ, ಫೆಬ್ರವರಿ 21, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೂಡುಬಿದಿರೆ : ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ

Twitter
Facebook
LinkedIn
WhatsApp
ಮೂಡುಬಿದಿರೆ : ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಅಕ್ಟೋಬರ್ 16 ರಂದು ಸಂಜೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಬೆಳುವಾಯಿ ಗ್ರಾಮದ ನವೀದ್ (30), ಪಡುಮಾರ್ನಾಡು ಗ್ರಾಮದ ಬಸವನಕಜೆಯ ಉಮೇಶ್ (40) ಮತ್ತು ಪದವು ದರ್ಕಾಸು ಮನೆ ನಿವಾಸಿ ಪ್ರಸಾದ್ ದೇವಾಡಿಗ (35) ಎನ್ನುವವರಾಗಿದ್ದಾರೆ.

ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬುವರಿಂದ ಹಣವನ್ನು ಪಡೆದು ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಲಾಗಿದೆ.

ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಪಂದ್ಯಕ್ಕೆ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುತ್ತಿದ್ದ ಬಗ್ಗೆ ತಿಳಿದುಬಂದಿದೆ. ತಾವು ಬೆಟ್ಟಿಂಗ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದ Comfort Zone 247 ಎಂಬ ವೆಬ್ ಸೈಟ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್,ರವರ ಮಾರ್ಗದರ್ಶನದಂತೆ, DCP ಸಿದ್ದಾರ್ಥ ಗೊಯಲ್ , DCP (ಅ & ಸಂ)ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ವಾಹನ ಕಳವು: 8 ಮಂದಿ ಬಂಧನ

ವಿಟ್ಲ: ಕುಡ್ತಮುಗೇರು ಎಂ.ಎಚ್‌. ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್‌ಅಪ್‌ ವಾಹನ ಕಳವು ಪ್ರಕರಣದ 8 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಂಷನ್‌ ಯಾನೆ ಸಾನು, ಜುನ್ಸಿಫ್, ನೌಫ‌ಲ್‌, ಹಂಸಕ್‌, ತಬ್ರಿಜ, ಮೊಹಮ್ಮದ್‌ ಉಸೈನ್‌, ಹ್ಯಾರಿಸ…, ಮೊಹಮ್ಮದ್‌ ಅಯೂಬ ಖಾನ್‌ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೆ. 23ರಂದು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ಶಾಮಿಯಾನ ಸಾಮಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿತ್ತು. ಗೋಣಿಕೊಪ್ಪದ ಗುಜರಿ ಅಂಗಡಿಯಿಂದ ಶಾಮಿಯಾನದ ಪಿಕಪ್‌ನಲ್ಲಿದ್ದ ಟಿನ್‌ ಶೀಟ್‌ ಹಾಗೂ ಕಬ್ಬಿಣದ ಪೈಪ್‌ಗ್ಳನ್ನು ಹಿಂದಿರುಗಿಸಿದ್ದಾರೆ. 2015 ಮಾಡೆಲ್‌ನ 8 ಲಕ್ಷ ಮೌಲ್ಯದ ಪಿಕಪ್‌ ವಾಹನ ಪತ್ತೆ ಹಚ್ಚಲಾಗಿಲ್ಲ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು