ಶನಿವಾರ, ಫೆಬ್ರವರಿ 1, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ 20 ವರ್ಷದ ಯುವಕ ಹೃದಯಘಾತದಿಂದ ಸಾವು

Twitter
Facebook
LinkedIn
WhatsApp
83

ಮಧುರೈ: ಇಲ್ಲಿನ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ 20 ವರ್ಷದ ಯುವಕನೋರ್ವ ಹೃದಯ ಸ್ಥಂಭನದಿಂದ ಅಸುನೀಗಿದ ಘಟನೆ ರವಿವಾರ ನಡೆದಿದೆ.

ಮೃತ ಯುವಕನನ್ನು ಕಲ್ಲಕುರುಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಉಥಿರಮ್ 2023 ರಕ್ತದಾನ ಮ್ಯಾರಥಾನ್ ನಲ್ಲಿ ಅವರು ಭಾಗವಹಿಸಿದ್ದರು. ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮತ್ತು ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಮ್ಯಾರಥಾನ್‌ ಗೆ ಚಾಲನೆ ನೀಡಿದ್ದರು.

ಬೆಳಿಗ್ಗೆ ಮ್ಯಾರಥಾನ್ ನ್ನು ಪೂರ್ಣಗೊಳಿಸಿದ ದಿನೇಶ್ ಕುಮಾರ್ ಅವರು ಗಂಟೆಗಳ ಕಾಲ ಆರೋಗ್ಯವಂತರಾಗಿಯೇ ಇದ್ದರು. ಆದರೆ ಬಳಿಕ ಬಳಲಿಕೆ ಕಾಡತೊಡಗಿದ ಕಾರಣ ರೆಸ್ಟ್ ರೂಂ ಗೆ ತೆರಳಿದರು ಎಂದು ಅವರ ಗೆಳೆಯರು ಹೇಳಿದ್ದಾರೆ. ಬಳಿಕ ಅವರು ನೋಡಿದಾಗ ದಿನೇಶ್ ಕುಮಾರ್ ಉಪಸ್ಮಾರದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಸಮೀಪದ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಆಸ್ಪತ್ರೆಯ ಅಧಿಕಾರಿಗಳು ಅವರನ್ನು ಬೆಳಿಗ್ಗೆ 8:45 ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದರು, ಅಲ್ಲಿ ಅವರಿಗೆ ಕೃತಕ ಉಸಿರಾಟ ಚಿಕಿತ್ಸೆ ನೀಡಲಾಯಿತು.

ಆಸ್ಪತ್ರೆಗೆ ಕರೆತಂದ ಕೆಲವೇ ಗಂಟೆಗಳ ನಂತರ ಬೆಳಗ್ಗೆ 10:10ರ ಸುಮಾರಿಗೆ ಹೃದಯ ಸ್ತಂಭನಕ್ಕೆ ಒಳಗಾದರು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ಅಧಿಕಾರಿಗಳು ಅವರನ್ನು ಬದುಕಿಸಲು ಪ್ರಯತ್ನಿಸಿದರೂ, ಅವರು ಬೆಳಿಗ್ಗೆ 10:45 ಕ್ಕೆ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್ ದೂರು ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Udupi: ನೋಡ ನೋಡ್ತಿದ್ದಂತೆ ಜಲಪಾತಕ್ಕೆ ಬಿದ್ದ ಯುವಕ

ಉಡುಪಿ: ಜಲಪಾತ (Falls) ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರ ಅರಶಿನಗುಂಡಿಯಲ್ಲಿ (Arashinagundi Falls) ನಡೆದಿದೆ. ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಶಿವಮೊಗ್ಗ ಭದ್ರಾವತಿ (Bhadravati) ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದನು. ರಭಸವಾಗಿ ನೀರು ಧುಮ್ಮುಕ್ಕುತ್ತಿರುವ ಅಪಾಯದ ಸ್ಥಳದಲ್ಲಿ ಶರತ್ ನಿಂತಿದ್ದನು. ಈ ವೇಳೆ ಆಯತಪ್ಪಿ ಶರತ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿದ್ದು, ಶರತ್​ಗಾಗಿ ಶೋಧ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಲರೂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕರು ಜಲಪಾತದ ತುದಿಯಲ್ಲಿ ನಿಂತು ರೀಲ್ಸ್​ ಮಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು