ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು : ಮಹಿಳಾ ಠಾಣಾ ಬಳಿಯೇ ಯುವತಿಗೆ ಚೂರಿ ಇರಿತ ; ವಿಟ್ಲ ಮೂಲದ ಯುವತಿ ಗಂಭೀರ!

Twitter
Facebook
LinkedIn
WhatsApp
ಪುತ್ತೂರು : ಮಹಿಳಾ ಠಾಣಾ ಬಳಿಯೇ ಯುವತಿಗೆ ಚೂರಿ ಇರಿತ ; ವಿಟ್ಲ ಮೂಲದ ಯುವತಿ ಗಂಭೀರ!

ಪುತ್ತೂರು :ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಮಂಗಳೂರು: ದ್ವಿಚಕ್ರ ವಾಹನ ಕಳವು: ಯುವಕನನ್ನು ಬಂಧಿಸಿದ ಪೊಲೀಸರು

ಮಂಗಳೂರು, ಆ 23 : ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಆರೋಪಿತ ಯುವಕ ಪತ್ತೆಯಾಗಿದ್ದಾನೆ.

ಆರೋಪಿ ಯುವಕ ಕಳವು ಮಾಡಿದ ಸ್ಕೂಟರನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದ. ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆತನಿಂದ ಒಟ್ಟು ಸುಮಾರು ಒಂದು ಲಕ್ಷ ಹತ್ತು ಸಾವಿರ ಬೆಲೆ ಬಾಳುವ 2 ದ್ವಿ ಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು