ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು :ಸೊತ್ತು ಕಳವು ಮಾಡಿದ್ದ ಕಳ್ಳನನ್ನು ಹಿಡಿದ ಶಿಕ್ಷಕರು!

Twitter
Facebook
LinkedIn
WhatsApp
ಪುತ್ತೂರು :ಸೊತ್ತು ಕಳವು ಮಾಡಿದ್ದ ಕಳ್ಳನನ್ನು ಹಿಡಿದ ಶಿಕ್ಷಕರು!

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಸೊತ್ತುಗಳನ್ನು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೇ ಹಿಡಿದ ಘಟನೆ ಅ. 5ರಂದು ನಡೆದಿದೆ.

ಪುತ್ತೂರು ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಇಟ್ಟಿದ್ದ ಡ್ರಮ್‌ ಮತ್ತು ಇತರ ಸ್ಟೀಲ್‌ ಮತ್ತು ಪ್ಲಾಸ್ಟಿಕ್‌ ಸೊತ್ತುಗಳು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿತ್ತು. ಈ ಕುರಿತು ಶಾಲೆಯ ಉಪಪ್ರಾಂಶುಪಾಲರು ಸಿಸಿ ಟಿವಿ ಪರಿಶೀಲಿಸಿದಾಗ ವ್ಯಕ್ತಿಯೋರ್ವ ಕಳವು ಮಾಡುವುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. 

ಈ ಕುರಿತು ಶಾಲೆಯ ಶಿಕ್ಷಕರಿಗೆ, ಎಸ್‌ಡಿಎಂಸಿ ಮತ್ತು ನಗರಸಭಾ ಸ್ಥಳೀಯ ಸದಸ್ಯರಿಗೆ, ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅ. 5ರಂದು ಸ್ಟೀಲ್‌ ಡ್ರಮ್‌ ಕದ್ದೊಯ್ದ ವ್ಯಕ್ತಿ ಶಾಲೆಯ ಆವರಣದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಉಪಪ್ರಾಂಶುಪಾಲರು ಮತ್ತು ಶಿಕ್ಷಕರು ಆತನನ್ನು ಹಿಡಿದಿದ್ದಾರೆ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿರುವ ಕಳ್ಳ ಉತ್ತರಪ್ರದೇಶ ಮೂಲದವನೆನ್ನಲಾಗಿದೆ.

ಉಡುಪಿ -ಮನೆಯಿಂದ ಹೊರಗೆ ಹೋಗಿದ್ದ ಯುವತಿ ನಾಪತ್ತೆ

ಉಡುಪಿ, ಅಕ್ಟೋಬರ್ 04 : ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ
ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು