ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಕೂಟರ್, ಓಮ್ನಿ ಡಿಕ್ಕಿ- ಸ್ಕೂಟರ್ ಸವಾರ ದಾರುಣ ಸಾವು..!

Twitter
Facebook
LinkedIn
WhatsApp
ಸ್ಕೂಟರ್, ಓಮ್ನಿ ಡಿಕ್ಕಿ- ಸ್ಕೂಟರ್ ಸವಾರ ದಾರುಣ ಸಾವು..!

ಮುಲ್ಕಿ: ಯುವಕನೋರ್ವ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಓಮ್ನಿ ಕಾರೊಂದು ಢಿಕ್ಕಿಹೊಡೆದು  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಲ್ಕಿ ಸಮೀಪದ ಕಾರ್ನಾಡ್ ಗೇರುಕಟ್ಟೆಯಲ್ಲಿ ನಡೆದಿದೆ.

ಕಾರ್ನಾಡ್ ಅಮೃತಾನಂದ ಮಯಿ ನಗರ ನಿವಾಸಿ ಪ್ರಜ್ವಲ್  (21) ಸ್ಕೂಟಿ ಸವಾರ ಮೃತ ಯುವಕ ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಬಪ್ಪನಾಡು ಬಳಿಯ ಪೆಟ್ರೋಲ್ ಬಂಕ್ ಸಿಬ್ಬಂದಿಯಾಗಿದ್ದು, ತುರ್ತು ಕೆಲಸದ ನಿಮಿತ್ತ ಸ್ಕೂಟರ್ ನಲ್ಲಿ ಹೋಗುತ್ತಿರುವಾಗ ಓಮ್ನಿ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಪ್ರಜ್ವಲ್ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಈ ಭಾಗದಲ್ಲಿ ರಸ್ತೆ, ಚರಂಡಿ ಅವ್ಯವಸ್ಥೆ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನ ದಿನದ ರಾತ್ರಿ ಸ್ಕೂಟರ್ ನಲ್ಲಿ ದಂಪತಿಗಳಿಬ್ಬರು ಹೋಗುತ್ತಿರುವಾಗ ನಿಯಂತ್ರಣ ತಪ್ಪಿ, ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳಿಯರು ತಿಳಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಓಮ್ನಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ತೀವ್ರ ಬಡತನದಲ್ಲಿರುವ ಮೃತ ಯುವಕ ಪ್ರಜ್ವಲ್ ಕುಟುಂಬ ನಡೆದ ಘಟನೆಯಿಂದ ತತ್ತರಿಸಿ ಹೋಗಿದೆ.

ಮೃತ ಯುವಕ ಪ್ರಜ್ವಲ್ ನಾರಾಯಣ ಗುರು ಚಲನಚಿತ್ರದಲ್ಲಿ ಬಾಲ ನಟನಾಗಿ ಅಭಿನಯಿಸಿದ್ದನು.

ಮಂಗಳೂರು: ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಸೆರೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಫೈಸಲ್‌ ನಗರದ ತಲ್ಲತ್ (39) ಬಂಧಿತ ಆರೋಪಿ.

ಆರೋಪಿಯು ಹಲ್ಲೆ, ಕೊಲೆಯತ್ನ, ಅಪಹರಣ, ಹಫ್ತಾ ವಸೂಲಿ, ದರೋಡೆ, ಕೊಲೆ ಸಹಿತ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಆರೋಪಿ 2004ನೇ ಇಸವಿಯಲ್ಲಿ ಹಲ್ಲೆ ಪ್ರಕರಣ ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಈತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಮಂಗಳೂರು ನಗರ  ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್  ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಆರೋಪಿ ಪತ್ತೆ ಕಾರ್ಯವನ್ನು ಕೈಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು