ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Twitter
Facebook
LinkedIn
WhatsApp
ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

ಉಡುಪಿ, ಆ 09: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ.

15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್, ಶಾಲೆಗೆ ಹೋಗುವ ಸಮಯ ಆಕೆಯನ್ನು ತನ್ನ ಕಾರಿನಲ್ಲಿ ಬಲತ್ಕಾರವಾಗಿ ಇನ್ನೋರ್ವ ಆರೋಪಿಯ ಮನೆಗೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಬಲತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಮಾಡಿ ನಂತರ ಆಕೆಯನ್ನು ವಾಪಾಸ್ಸು ಮನೆಗೆ ಬಿಟ್ಟಿದ್ದನು. ಇದೇ ವೇಳೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು.

ನೊಂದ ಬಾಲಕಿ ಬೇಸರದಲ್ಲಿರುವುದನ್ನು ಗಮನಿಸಿದ ಆಕೆಯ ಮನೆಯವರು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂತು. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ತನಿಖೆ ನಡೆಸಿದ ಆಗಿನ ಡಿವೈಎಸ್ಪಿ ಜೈಶಂಕರ್ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿ ಈಗಾಗಲೇ ವಿವಾಹವಾಗಿದ್ದು ನೊಂದ ಬಾಲಕಿಗೆ ದೌರ್ಜನ್ಯ ಎಸಗಿರುವುದು ಬಾಲಕಿಯ ಸಾಕ್ಷ್ಯ ಮತ್ತು ಇತರ ಸಾಂಧರ್ಬಿಕ ಸಾಕ್ಷ್ಯಗಳಿಂದ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗೆ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದರು. ಅಲ್ಲದೆ 23ಸಾವಿರ ರೂ. ದಂಡ ವಿಧಿಸಿದ್ದು, ದಂಡದ ಮೊತ್ತದಲ್ಲಿ 10ಸಾವಿರ ರೂ. ಸರಕಾರಕ್ಕೆ ಮತ್ತು 13 ಸಾವಿರ ರೂ. ನೊಂದ ಬಾಲಕಿಗೆ ಪರಿಹಾರವಾಗಿ ನೀಡಬೇಕು ಮತ್ತು ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ಆದೇಶಿಸಿದರು.

ಬಾಲಕಿಯ ದೈಹಿಕ ದೌರ್ಜನ್ಯಕ್ಕೆ ಸಹಕರಿಸಿದ ಎನ್ನಲಾದ ಆರೋಪಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಡುಗಡೆಗೊಳಿಸಿದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಿಚಾರಣೆ ನಡೆಸಿದ್ದು, ಕುಂದಾಪುರದ ಸರಕಾರಿ ಅಭಿಯೋಜಕ ಹರಿಶ್ಚಂದ್ರ ವಾದ ಮಂಡಿಸಿದ್ದಾರೆ.

ಮಂಗಳೂರು: ಚಿನ್ನಾಭರಣವನ್ನು ದೋಚಿದ ಪತಿರಾಯ- ಪೊಲೀಸ್‌ ಠಾಣೆಯಲ್ಲಿ ಪತ್ನಿ ದೂರು

ಮಂಗಳೂರು,ಆ 09 : ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಪ್ರಮುಖ ಆರೋಪಿಗಳು.

ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲಾಟ್‌ನ ಕಪಾಟಿನಲ್ಲಿ ಭದ್ರವಾಗಿ ಇರಿಸಲಾಗಿತ್ತು. ಈ ವಿಷಯ ಪಿರ್ಯಾದಿದಾರರು ಮತ್ತು ಗಂಡ ಇಲಿಯಾಸ್‌ನಿಗೆ ಮಾತ್ರ ಗೊತ್ತಿತ್ತು.

ಪಿರ್ಯಾದಿದಾರರು ಮತ್ತು ಅವರ ಗಂಡನಿಗೆ ಜಗಳವಾಗಿ 2023 ರ ಏಪ್ರಿಲ್‌ ತಿಂಗಳಿನಲ್ಲಿ ಮಹಿಳೆ ಮನೆಯಿಂದ ಹೊರ ಬಂದು ತಾಯಿ ಮನೆಯಲ್ಲಿ ವಾಸವಿರುತ್ತಿದ್ದರು ಎನ್ನಲಾಗಿದೆ. ವಾರಕ್ಕೊಮ್ಮೆ ಫ್ಲಾಟ್‌ಗೆ ಹೋಗಿ ಬರುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಫ್ಲ್ಯಾಟ್‌ಗೆ ಹೋಗಿ ವಾಚ್‌ಮ್ಯಾನ್‌ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ಮಾಹಿತಿ ಸಿಕ್ಕಿದೆ.

ಈ ಸಂದರ್ಭ ದೂರುದಾರ ಮಹಿಳೆ ಅನುಮಾನಗೊಂಡು ಮನೆಯ ಬಂಗಾರವಿಟ್ಟ ಲಾಕರ್‌ ಕಪಾಟಿನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನವಿರಲಿಲ್ಲ. ತಕ್ಷಣ ಗಂಡನಿಗೆ ಕರೆ ಮಾಡಿದಾಗ ‘ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನಿನಗೆ ಏನು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದುಕೊಂಡಿರುವುದಾಗಿ ಹಾಗೂ ಅದಕ್ಕೆ ಬಡ್ಡಿ ಕಟ್ಟಲು ಆಗದೇ ಪ್ರಭಾಕರ್‌ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾನೆ. ಅಡವಿಟ್ಟ ಚಿನ್ನದಲ್ಲಿ ಪ್ರಭಾಕರನು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ದೂರುದಾರ ಮಹಿಳೆ ಅವರು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು