ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಗುದ್ದಿದ ಕಾರು ; ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು!

Twitter
Facebook
LinkedIn
WhatsApp
ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಗುದ್ದಿದ ಕಾರು ; ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು!

ಸುಳ್ಯ : ಅಡ್ಕಾರಿನಲ್ಲಿ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಕಾರ್ಮಿಕರ ಪೈಕಿ ಮೂವರು ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು ಬೆಳಿಗ್ಗೆ ಅವರಲ್ಲಿ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರು ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.

ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂದು ರಸ್ತೆ ಬದಿ ನಿಂತಿದ್ದ ಈ ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು.

ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರಿಗೂ ಗಾಯಗಳಾಗಿದ್ದು ಮೂವರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ಪೈಕಿ ಚಂದ್ರಪ್ಪ ಅಲ್ಲಿ ಸಾವನ್ನಪ್ಪಿದ್ದರು. ವೆಂಕಪ್ಪರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಅವರಿಗೆ ಸುಳ್ಯದಲ್ಲೇ ಚಿಕಿತ್ಸೆ ಕೊಡಿಸಲಾಯಿತು. ರೇಗಪ್ಪ, ಮಾಂತೇಶ್ ಅವರನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದ್ದು, ಅವರಿಬ್ಬರೂ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ

ಸಂಪಾಜೆ – ವಾಹನ ಡಿಕ್ಕಿ ಕಾಡು ಹಂದಿ ಸಾವು..!!

ಪುತ್ತೂರು ಅಗಸ್ಟ್ 31: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಭಾರೀ ಗಾತ್ರದ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಸಂಪಾಜೆಯ ಅರಣ್ಯಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಕಾಡು ಹಂದಿಯನ್ನು ಕಲ್ಲುಗುಂಡಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು