ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಂಗಳೂರಲ್ಲಿ ಜು. 28ರ ವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

Twitter
Facebook
LinkedIn
WhatsApp
55

ಮಂಗಳೂರು, ಜು 18 : ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2023ರ ಜು.28ರ ವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‍ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ) “ಪಾಲಿಸ್ಟೆರೀನ್ ಮತ್ತು ವಿಸ್ತರಿತ “ಪಾಲಿಸ್ಟೆರೀನ್ ಸೇರಿದಂತೆ ಮೇಲೆ ತಿಳಿಸಲಾದ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 2022 ರಿಂದ ನಿಷೇಧಿಸಲಾಗಿದೆ.

ಇನ್ನು ಏಕ ಬಳಕೆ ಪಾಸ್ಟಿಕ್ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‍ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ ಸಿನಿಮಾ ಮನೆಗಳು, ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ ಕಾಲೇಜುಗಳು, ಕಚೇರಿ ಸಂಕೀರ್ಣಗಳು/ ಆಸ್ಪತ್ರೆಗಳು, ಇತರೆ ಸಂಸ್ಥೆಗಳು) ಮತ್ತು ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ (SUP) ಬದಲಾಗಿ ಪರಿಸರ ಸ್ನೇಹಿ ಪ್ಯಾಕೇಜಿಂಗ್ ಮತ್ತು ಸಾಮಾಗ್ರಿಗಳ ಬಳಕೆ ಮಾಡಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಪುನರ್ ಬಳಸುವುದು, ಮರುಬಳಕೆ ಮಾಡುವುದು ಮುಂತಾದ ಉತ್ತಮ ಪದ್ಧತಿಗಳನ್ನು ತರುವುದು ಕಡ್ಡಾಯವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆ, ಸಂಗ್ರಹಣೆ ಮತ್ತು ವಿಲೇವಾರಿಯನ್ನು ಲಾಗ್‍ಬುಕ್ ನಲ್ಲಿ ದಾಖಲೆ ಮಾಡುವಂತೆ ಸೂಚಿಸಿದೆ.

ಈ ಆದೇಶವನ್ನು ಪಾಲಿಸದೆ ನಿಷೇಧಿತ ಪ್ಲಾಸ್ಟಿಕ್‍ಗಳ ಬಳಕೆ ಮಾಡಿದ್ದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು-2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ) 200ರೂ.ಗಳಿಂದ 20,000ರೂ.ಗಳ ವರೆಗೆ ದಂಡ ವಿಧಿಸಿ, ಪರವಾನಗಿ ರದ್ದುಗೊಳಿಸಲಾಗುವುದು ಹಾಗೂ ಉದ್ಧಿಮೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು