ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ತಾತ್ಕಾಲಿಕ ತಡೆ

Twitter
Facebook
LinkedIn
WhatsApp
ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ತಾತ್ಕಾಲಿಕ ತಡೆ

ಉಡುಪಿ: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ವ್ಯಾಪ್ತಿಯಲ್ಲಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವ ಉದ್ದೇಶದಿಂದ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ಕಾಲಾವಕಾಶ ಬೇಕಿರುವುದರಿಂದ ಪ್ರವೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್‌ ತಿಳಿಸಿದ್ದಾರೆ.

ಈ ಥೀಮ್‌ ಪಾರ್ಕ್‌ ಜ. 27ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ ಕಲ್ಪಿಸಲಾಗಿತ್ತು. ಈಗ ಕಾಮಗಾರಿಯಲ್ಲಿ ಪರಶುರಾಮಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆಪ್ಟಂಬರ್‌ ವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು.

ಈಗ ಕಾಮಗಾರಿ ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಅನುಮತಿ ಕೋರಿರುವುದರಿಂದ ನವೆಂಬರ್‌ ಅಂತ್ಯದ ವರೆಗೆ ನಿಷೇಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 7 ರಿಂದ ಕುಮಾರಪರ್ವತ ಚಾರಣಕ್ಕೆ ಅವಕಾಶ

ಸುಬ್ರಹ್ಮಣ್ಯ ಅಕ್ಟೋಬರ್ 07: ಕುಮಾರಪರ್ವತ ಚಾರಣಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಅಕ್ಟೋಬರ್ 07 ರಿಂದ ಅವಕಾಶ ಕಲ್ಪಿಸಲಾಗಿದೆ.

ಬೇಸಿಗೆ ಹಾಗೂ ಮಳೆಯ ಕಾರಣದಿಂದಾಗಿ ಮೇ ತಿಂಗಳಿನಿಂದ ಸೆಪ್ಟೆಂಬರ್ 29 ರವರೆಗೆ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟೆಂಬರ್ 30ರಿಂದ ಚಾರಣ ಆರಂಭಗೊಂಡಿತ್ತು, ಆದರೆ ಮತ್ತೆ ಮಳೆ ಆರಂಭವಾದ ಹಿನ್ನಲೆ ಅಕ್ಟೋಬರ್ 3 ರಿಂದ ನಿರ್ಬಂಧ ವಿಧಿಸಲಾಗಿತ್ತು.

ಇದೀಗ ಮಳೆ ಕಡಿಮೆಯಾಗಿದ್ದು ಅರಣ್ಯ ಇಲಾಖೆ ಇದೀಗ ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಿದೆ. ಚಾರಣ ಆರಂಭಗೊಂಡಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ಅರಣ್ಯ ಇಲಾಖೆ ವ್ಯವಸ್ಥೆ ಮಾಡಿದೆ. ಕುಮಾರಪರ್ವತ, ಗಿರಿಗದ್ದೆ, ಕಲ್ಲಚಪ್ಪರ ಸೇರಿದಂತೆ ವಿವಿಧೆಡೆ ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಲಾಗಿದೆ.

ಸುಬ್ರಹ್ಮಣ್ಯದಿಂದ ಸುಮಾರು 13 ಕಿ.ಮೀ. ಕಾಡು, ಬೆಟ್ಟಗಳಲ್ಲಿ ಚಾರಣ ನಡೆಸಿ ಕುಮಾರಪರ್ವತದ ತುದಿ ಏರಬಹುದು. ಸುಮಾರು 5 ಕಿ.ಮೀ. ಕ್ರಮಿಸಿದಾಗ ಗಿರಿಗದ್ದೆ ಎಂಬಲ್ಲಿ ಜೋಯಿಸರ ಮನೆ ಇದ್ದು, ಚಾರಣಿಗರಿಗೆ ಊಟ, ಉಪಾಹಾರ, ನೀರು ಲಭ್ಯ. ಕುಮಾರಪರ್ವತವನ್ನು ಸುಬ್ರಹ್ಮಣ್ಯದಿಂದ ಏರಲು ಹೊರಟರೆ ಲೆಂಕಿರಿಗುಡ್ಡ, ಗಿರಿಗದ್ದೆ, ಅರಣ್ಯ ಇಲಾಖೆ ಚೆಕ್‌ಪೋಸ್ಟ್‌, ಕಲ್ಲುಚಪ್ಪರ, ಶೇಷಪರ್ವತ, ಭತ್ತದ ರಾಶಿ, ಸಿದ್ಧ ಪರ್ವತ ದಾಟಿ ಹೋಗಬೇಕು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು