ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಮೀನಿನ ವಾಹನದ ಹಿಂಬದಿಗೆ ಸ್ಕೂಟರ್ ಡಿಕ್ಕಿ ; ಸವಾರ ಸಾವು!

Twitter
Facebook
LinkedIn
WhatsApp
ಉಳ್ಳಾಲ: ಮೀನಿನ ವಾಹನದ ಹಿಂಬದಿಗೆ ಸ್ಕೂಟರ್ ಡಿಕ್ಕಿ ; ಸವಾರ ಸಾವು!

ಮಂಗಳೂರು ಅಕ್ಟೋಬರ್ 11: ಎದುರುಗಡೆ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ವಾಹನದ ಹಿಂದೆ ಇದ್ದ ಸ್ಕೂಟರ್ ಸವಾರ ನಿಂತ್ರಣ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀದ್ (21)ಎಂದು ಗುರುತಿಸಲಾಗಿದೆ. ಅಝ್‌ವೀದ್ ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದದ್ ವೇಳೆ ನೇತ್ರಾವತಿ ಸೇತುವೆಯಲ್ಲಿ ಅವರ ಸ್ಕೂಟರ್ ನ ಮುಂಭಾಗ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದೆ.

ಈ ವೇಳೆ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳಕೊಂಡು ಮೀನು ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌. ಇದರಿಂದ ಸವಾರ ಅಝ್‌ವೀದ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಸಮೀಪದ ಆಸ್ಲತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಸವಾರ ಅಝ್‌ವೀದ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ‌. ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.

ಉಳ್ಳಾಲ :ಪುಣೆಯಲ್ಲಿ ತೌಡುಗೋಳಿ ನವವಿವಾಹಿತೆ ಅನುಮಾನಾಸ್ಪದ ಸಾವು..!

ಉಳ್ಳಾಲ: ಮಹಾರಾಷ್ಟ್ರದ ಪುಣೆಯಲ್ಲಿ ಉಳ್ಳಾಲ ತೌಡುಗೋಳಿ ನವವಿವಾಹಿತೆ  ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38) ಮೃತ ದುರ್ದೈವಿಯಾಗಿದ್ದಾಳೆ.

ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಸುರೇಶ್ ಕೈಯ್ಯ ಎಂಬವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ಸುಜಾತಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು.

ಅ.8 ರಂದು ಸುಜಾತ ಮೃತದೇಹ ಭಾರತೀಯ ವಿದ್ಯಾಪೀಠದಲ್ಲಿರುವ ಮನೆಯೊಳಗೆ ಅನುಮಾನಸ್ಪದ ರೀತಿಯಲ್ಲಿ ಕಂಡುಬಂದಿತ್ತು.

ಈ ಬಗ್ಗೆ ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಶವ ಮಹಜರಿಗೆ ಕಳುಹಿಸಲಾಗಿತ್ತು.

ಅ.9 ರಂದು ತೌಡುಗೋಳಿ ಸಮೀಪ ಸುಜಾತ ಅವರ ಅಂತಿಮ ಸಂಸ್ಕಾರ ನೆರವೇರಿದ್ದು, ಮನೆಮಂದಿ ಸುರೇಶ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ಶವಮಹಜರು ವರದಿ ಬಂದ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ.

ಸುಜಾತಾ ಅವರು ತೊಕ್ಕೊಟ್ಟು ಬ್ಯೂಟಿಪಾರ್ಲರ್ ನಲ್ಲಿ ಈ ಹಿಂದೆ ಬ್ಯೂಟೀಷಿಯನ್ ಆಗಿ ಕೆಲಸ‌ನಿರ್ವಹಿಸುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು