ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲ :ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ!

Twitter
Facebook
LinkedIn
WhatsApp
ಉಳ್ಳಾಲ :ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ!

ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಳ್ಳಾಲ ನೇತ್ರಾವತಿ ನದಿಯ ಹೊಸ ಸೇತುವೆಯಲ್ಲಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿತ್ತು. ಇದೇ ವೇಳೆ ಭಾರೀ ಮಳೆ ಆರಂಭವಾಗಿದ್ದು, ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರೊಂದು ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬಳಿಕ ಒಂದರ ಹಿಂದೆ ಒಂದರಂತೆ ರಿಟ್ಝ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಕೊನೆಯದಾಗಿ ಕುಂಪಲ ಕಡೆಗೆ ತೆರಳುವ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಲವರಿಗೆ ಅಲ್ಪ- ಸ್ವಲ್ಪ ಗಾಯಗಳಾಗಿವೆ. ಘಟನೆಯಲ್ಲಿ ಬಸ್ಸು ಸಹಿತ ಆರು ವಾಹನಗಳಿಗೆ ಜಖಂ ಆಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು- ತೊಕ್ಕೋಟು ನಡುವೆ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.

ಸಂಜೆ ವೇಳೆ ಆಗಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ಸಹಜವಾಗಿ ಜಾಸ್ತಿ ಇತ್ತು. ಮಂಗಳೂರು- ತೊಕ್ಕೋಟು ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ದಟ್ಟಣೆ ಜಾಸ್ತಿಯಾದಾಗ ಮುಗೇರ್‌ ಜಂಕ್ಷನ್‌ ನಿಂದ ವಾಹನಗಳು ಬಲ ಬದಿಯ ತೊಕ್ಕೋಟು- ಮಂಗಳೂರು ಏಕ ಮುಖ ರಸ್ತೆಯಲ್ಲಿ ಸಂಚರಿಸಲು ಆರಂಭಿಸಿದವು. ಹೀಗೆ ದ್ವಿಮುಖ ವಾಹನ ಸಂಚಾರ ಆರಂಭ ಗೊಂಡಿದ್ದರಿಂದ ಕೆಲವೇ ಹೊತ್ತಿನಲ್ಲಿ ಈ ಮಾರ್ಗದಲ್ಲಿ ವಾಹನಗಳು ಸಿಲುಕಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

Kinnigoli: ಬಸ್, ಟಿಪ್ಪರ್ ಢಿಕ್ಕಿ- ಮೂವರು ವಿದ್ಯಾರ್ಥಿಗಳಿಗೆ ಗಾಯ..!

ಕಿನ್ನಿಗೋಳಿ: ಕಿನ್ನಿಗೋಳಿ ಕಟೀಲು ಹೆದ್ದಾರಿಯ ಬಲ್ಲಾಣ ಚರ್ಚ್ ಬಳಿ ತಿರುವಿನಲ್ಲಿ ಟಿಪ್ಪರ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಕಿನ್ನಿಗೋಳಿ ಪಕ್ಷಿಕೆರೆಯ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಕಟೀಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ರಾಜಶ್ರೀ ಎಂಬ ಹೆಸರಿನ ಬಸ್ಸಿಗೆ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಬಸ್ ಹಾಗೂ ಟಿಪ್ಪರ್ ಗೆ ಹಾನಿಯಾಗಿದೆ. ಟಿಪ್ಪರ್ ನ ಸ್ಟೇರಿಂಗ್ ರಾಡ್ ತುಂಡಾದದ್ದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು