ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲ: ಸಮುದ್ರಕ್ಕೆ ಹಾರಿ ಮಗ ಆತ್ಮಹತ್ಯೆ; ಮನನೊಂದು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ತಂದೆಯೂ ಆತ್ಮಹತ್ಯೆ!

Twitter
Facebook
LinkedIn
WhatsApp
ಉಳ್ಳಾಲ: ಸಮುದ್ರಕ್ಕೆ ಹಾರಿ ಮಗ ಆತ್ಮಹತ್ಯೆ; ಮನನೊಂದು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ತಂದೆಯೂ ಆತ್ಮಹತ್ಯೆ!

ಮಂಗಳೂರು ಅಗಸ್ಟ್ 16: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದ್ದು ಅವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.

ಪುತ್ರ ರಾಜೇಶ್ (26) ಕಳೆದ ಜುಲೈ 10 ರಂದು ನಾಪತ್ತೆಯಾಗಿದ್ದ, ಎರಡು ದಿನಗಳ ಬಳಿಕ ರಾಜೇಶ್ ನ ಮೃತದೇಹ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದು, ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು. ಅಗಸ್ಟ್ 13 ರಂದು ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ.

ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಸೋಮವಾರ ಲೋಕೇಶ್ ರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ. ರಾಜೇಶ್ ರವರ ಸಾವಿನ ಬಳಿಕ ಕೇವಲ 33 ದಿನದಲ್ಲಿ ತಂದೆ ಲೋಕೇಶ್ ರ ಸಾವು ಇದೀಗ ಮನೆಯವರಿಗೆ ಹಾಗೂ ಪರಿಸರ ಪ್ರದೇಶದಲ್ಲಿ ಶೋಕಸಾಗರವನ್ನುಂಟುಮಾಡಿದೆ. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ವಿಟ್ಲ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ..!

ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ.

ಪ್ರಶಾಂತ್ ನಾಯ್ಕ್ (29)  ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು,  ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ.

ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ. ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ. ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಈತ ಸದಸ್ಯನಾಗಿ ಸೇವೆ ಮಾಡುತ್ತಿದ್ದ.

ಕೌಟುಂಬಿಕ ಕಲಹ ಪ್ರಶಾಂತ್ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು